Breaking News

ನಮೂನೆ ಸಲ್ಲಿಸದಿದ್ದರೆ ಹೆಸರು ಕೈಬಿಡಲಾಗುವುದು

Spread the love

ಬೆಳಗಾವಿ ಮಹಾನಗರ ಪಾಲಿಕೆಯ ಎಸ್‌ಐಆರ್ ಕೇಂದ್ರದಲ್ಲಿ ನಡೆಯುತ್ತಿರುವ ಗಣಕೀಕರಣ ಕಾರ್ಯವನ್ನು ಡಾ. ಸಿದ್ದು ಹುಲ್ಲೋಳಿ ಹಾಗೂ ಉದಯಕುಮಾರ ಟಿ. ಪರಿಶೀಲಿಸಿದರು.

ಬೆಳಗಾವಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ವಿತರಿಸಲಾದ ನಮೂನೆಗಳನ್ನು ಭರ್ತಿ ಮಾಡಿ ನಿಗದಿತ ಅವಧಿಯಲ್ಲಿ ಸಲ್ಲಿಸದಿದ್ದರೆ ಸಂಬಂಧಿತ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಕೈಬಿಡಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ್. ಎಂ ಎಚ್ಚರಿಕೆ ನೀಡಿದರು.
ಶುಕ್ರವಾರ ನಗರದ ಉತ್ತರ ಹಾಗೂ ದಕ್ಷಿಣ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಎಸ್‌ಐಆರ್ ಕಾರ್ಯದ ಪ್ರಗತಿಯನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು. ಸಭೆಗಳು, ವಿಡಿಯೊ ಕಾನ್ಫರೆನ್ಸ್ ಹಾಗೂ ಸ್ಥಳೀಯ ಪರಿಶೀಲನೆಗಳ ಮೂಲಕ ಪರಿಷ್ಕರಣೆ ಕಾರ್ಯವನ್ನು ನಿರಂತರವಾಗಿ ಅವಲೋಕಿಸಲಾಗುತ್ತಿದೆ. ಸಿಬ್ಬಂದಿಗೆ ವಿವಿಧ ಹಂತಗಳಲ್ಲಿ ತರಬೇತಿ ನೀಡಲಾಗಿದ್ದು, ಉತ್ತಮವಾಗಿ ಕಾರ್ಯನಿರ್ವಹಿಸಿದವರಿಗೆ ಪ್ರಶಂಸಾಪತ್ರ ನೀಡಿ ಗೌರವಿಸಲಾಗುತ್ತಿದೆ. ಕರ್ತವ್ಯ ನಿರ್ಲಕ್ಷ್ಯ ತೋರಿದ ಸಿಬ್ಬಂದಿಗೆ ನೋಟಿಸ್ ನೀಡಲಾಗುತ್ತಿದೆ ಎಂದು ತಿಳಿಸಿದರು.
ದಕ್ಷಿಣ ವಿಧಾನಸಭಾ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ಪಾಲಿಕೆ ಉಪ ಆಯುಕ್ತ ಡಾ. ಸಿದ್ದು ಹುಲ್ಲೋಳಿ ಮಾತನಾಡಿ, ಕ್ಷೇತ್ರದಲ್ಲಿ 2,52,937 ಮತದಾರರು ಹಾಗೂ 257 ಮತಗಟ್ಟೆಗಳಿದ್ದು, ಶೇ.100ರಷ್ಟು ಗಣತಿ ನಮೂನೆಗಳ ವಿತರಣೆ ಪೂರ್ಣಗೊಂಡಿದೆ. ಇದುವರೆಗೆ 1,14,020 ನಮೂನೆಗಳ ಗಣಕೀಕರಣ ಪೂರ್ಣಗೊಂಡಿದ್ದು, ಉಳಿದ ಕಾರ್ಯವೂ ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳಲಿದೆ ಎಂದು ಹೇಳಿದರು.
ಉತ್ತರ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಉದಯಕುಮಾರ ಟಿ. ಮಾತನಾಡಿ, ಕ್ಷೇತ್ರದಲ್ಲಿ 2,56,678 ಮತದಾರರು ಹಾಗೂ 257 ಮತಗಟ್ಟೆಗಳಿದ್ದು, ಇಲ್ಲಿಯೂ ಶೇ.100ರಷ್ಟು ನಮೂನೆಗಳ ವಿತರಣೆ ಪೂರ್ಣಗೊಂಡಿದೆ. ಇದುವರೆಗೆ 84,028 ನಮೂನೆಗಳ ಗಣಕೀಕರಣ ಪೂರ್ಣಗೊಂಡಿದ್ದು, ಉಳಿದ ಕಾರ್ಯವನ್ನು ತ್ವರಿತಗತಿಯಲ್ಲಿ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

Spread the love

About Laxminews 24x7

Check Also

ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯ ಸ್ಥಿರವಾಗಿದೆ: ಆರ್‌. ಅಶೋಕ್‌

Spread the loveಬೆಂಗಳೂರು: ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವಿಪಕ್ಷ ನಾಯಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ