Breaking News

ಬಟಕುರ್ಕಿ ಇಂದಿರಾಗಾಂಧಿ ವಸತಿ ಶಾಲೆಗೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಭೇಟಿ

Spread the love

ತಾಲೂಕಿನ ಬಟಕುರ್ಕಿ ಇಂದಿರಾಗಾಂಧಿ ವಸತಿ ಶಾಲೆಗೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೊಳ್ಳಿ ಬುಧವಾರ ಭೇಟಿ ನೀಡಿ ಮೂಲಸೌಕರ್ಯ ಹಾಗೂ ವ್ಯವಸ್ಥೆ ಪರಿಶೀಲಿಸಿದರು.
ಶಾಲೆಯಲ್ಲಿನ ಬೋಧನಾ ಕೊಠಡಿ, ವಸತಿ ಕಟ್ಟಡ ಹಾಗೂ ವಿಜ್ಞಾನ ಪ್ರಯೋಗಾಲಯ ಸೇರಿದಂತೆ ಮೂಲ ಸೌಕರ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಪರಿತಪಿಸುತ್ತಿರುವ ಕುರಿತು ಜು.11ರಂದು “ವಸತಿ ಶಾಲೆಗೆ ಬೇಕು ಸೌಕರ್ಯ’ ಶೀರ್ಷಿಕೆಯಡಿ ವಿಜಯವಾಣಿ ವಿಶೇಷ ವರದಿ ಪ್ರಕಟಿಸಿತ್ತು.
ಪರಿಶೀಲನೆ ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಕನ್ನೊಳ್ಳಿ ಪಠ್ಯಾಭ್ಯಾಸ, ಸ್ಪರ್ಧಾತ್ಮಕ ಪರೀೆಗಳ ಸಿದ್ಧತೆ ಹಾಗೂ ಶಾಲೆಯಲ್ಲಿನ ಸೌಲಭ್ಯ ಕುರಿತು ಮಾಹಿತಿ ಪಡೆದು ಮಕ್ಕಳ ಶಿಕ್ಷಣ ಹಾಗೂ ಆರೋಗ್ಯ ಕಾಳಜಿ ವಹಿಸಬೇಕು. ಕುಡಿಯುವ ನೀರು, ವಿದ್ಯುತ್​, ಶೌಚಾಲಯ, ಆಹಾರದ ವ್ಯವಸ್ಥೆ ಸಮರ್ಪಕವಾಗಿರುವಂತೆ ನೋಡಿಕೊಳ್ಳಬೇಕು ಎಂದು ಸಿಬ್ಬಂದಿಗೆ ನಿರ್ದೇಶನ ನೀಡಿದರು. ಪ್ರಾಚಾರ್ಯ ಜಿ.ಎಚ್​.ಮುದಕವಿ ಹಾಗೂ ಸಿಬ್ಬಂದಿ ಇದ್ದರು.

Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ