Breaking News

 ನೂತನ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ  ಕನ್ನಡದಲ್ಲಿಯೇ ಪ್ರಮಾಣ…

Spread the love

ಹೊಸದಿಲ್ಲಿ:   ನೂತನ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ  ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಸಂಸತ್ ನಲ್ಲಿ ಕನ್ನಡಾಭಿಮಾನ ಮೆರೆದಿದ್ದಾರೆ.

ಸಂಸತ್ ಭವನದಲ್ಲಿ   ಬುಧವಾರ  ನಡೆದ ಸರಳ ಸಮಾರಂಭದಲ್ಲಿ  ರಾಜ್ಯಸಭೆಗೆ ಹೊಸದಾಗಿ ಚುನಾಯಿತರಾದ   61 ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಪ್ರಮಾಣ ವಚನ ಬೋಧಿಸಿದರು.

20 ರಾಜ್ಯದ 61 ಸದಸ್ಯರು ಇತ್ತೀಚಿಗೆ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದಿಂದ ಕಾಂಗ್ರೆಸ್ ಹಿರಿಯ ಮುಖಂಡ,  ಮಲ್ಲಿಕಾರ್ಜುನ ಖರ್ಗೆ, ಎಚ್ ಡಿ. ದೇವೇಗೌಡ, ಅಶೋಕ ಗಸ್ತಿ ಹಾಗೂ ಈರಣ್ಣ ಕಡಾಡಿ ನಾಲ್ವರು ಸದಸ್ಯರು ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.

ಈ ಹಿಂದೆ ಲೋಕಸಭೆಯಲ್ಲಿ ಸಚಿವ ಸದಾನಂದಗೌಡ,   ಸಂಸದರಾದ ಡಿ.ಕೆ. ಸುರೇಶ,  ಪ್ರತಾಪ ಸಿಂಹ,  ಸುಮಲತಾ ಅಂಬರೀಷ್ ಅವರು   ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಇತಿಹಾಸ ಸೃಷ್ಠಿಸಿದ್ದರು. ಆ ಬೆನ್ನಲ್ಲೇ ಇದೀಗ  ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಕೂಡ ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿ  ಕನ್ನಡ  ಕಹಳೆ ಮೊಳಗಿಸಿದ್ದಾರೆ.


Spread the love

About Laxminews 24x7

Check Also

ಭಾರತದಲ್ಲಿ ಗ್ಯಾಸ್ ಎಮರ್ಜೆನ್ಸಿ; ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

Spread the loveನವದೆಹಲಿ: ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಹೆಚ್ಚುತ್ತಿರುವ ಸಂಘರ್ಷದಿಂದ ಉಂಟಾದ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ