Breaking News

ಸೋನಂ ವಾಂಗ್ ಚುಕ್ ಹೋರಾಟಕ್ಕೆ ಬೆಂಬಲ

Spread the love

ಬೆಳಗಾವಿ : ಜಂತರ್ ಮಂತರ್‌ನಿಂದ ಸೋನಂ ವಾಂಗ್‌ಚುಕ್‌ಗೆ ಬಲವಂತವಾಗಿ ತೆರವುಗೊಳಿಸಿವ ಕ್ರಮ ು ಹಾಗೂ ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ಶನಿವಾರ ಚನ್ನಮ್ಮ ವೃತ್ತದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸಲಾಯಿತು.
ವಾಂಗ್‌ಚುಕ್ ಹೋರಾಟ ಬೆಂಬಲಿಸಿ ನಡೆದ ಪ್ರತಿಭಟನೆಯಲ್ಲಿ ಬಸವರಾಜ ಕಟ್ಟಿಮನಿ ಪ್ರತಿಷ್ಠಾನದ ಅಧ್ಯಕ್ಷ ಪ್ರೊ.ಯಲ್ಲಪ್ಪ ಹಿಮ್ಮಡಿ ಮಾತನಾಡಿ, ಈವರೆಗೆ ನೀಟ್ ಪರೀಕ್ಷಾ ಅಕ್ರಮದಿಂದಾಗಿ 20 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಾವುಗಳಿಗೆ ನ್ಯಾಯ ಸಿಗಬೇಕು ಮತ್ತು ದೇಶದ ಶಿಕ್ಷಣ ವ್ಯವಸ್ಥೆ ಉಳಿಯಬೇಕು ಎಂಬ ಕೂಗಿನೊಂದಿಗೆ ವಾಂಗ್‌ಚುಕ್ ಹೋರಾಟ ನಡೆಸಿದ್ದಾರೆ. ಆದರೆ, ಸರ್ಕಾರ ಮಾತ್ರ ಕಿಂಚಿತ್ತು ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಐಡಿಎಸ್‌ಒ ಜಿಲ್ಲಾ ಸಂಚಾಲಕ ಮಹಾಂತೇಶ ಬಿಳೂರ ಮಾತನಾಡಿ, ಭಾರತದ ವಿದ್ಯಾರ್ಥಿ ಸಮುದಾಯವು ಕಳೆದ ಕೆಲ ತಿಂಗಳುಗಳಿಂದ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಎನ್‌ಟಿಎಯಲ್ಲಿನ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದೆ. ಈ ವಿಷಯದಲ್ಲಿ ಧರ್ಮೇಂದ್ರ ಪ್ರದಾನ ರಾಜೀನಾಮೆ ನೀಡಬೇಕೆಂಬ ದೊಡ್ಡ ಆಗ್ರಹ ಕೇಳಿಬರುತ್ತಿದೆ. ಇಷ್ಟೆಲ್ಲ ಹೋರಾಟ ನಡೆದಿದ್ದರೂ ಪ್ರತಿಕ್ರಿಯೆ ನೀಡದ ಸರ್ಕಾರ ಹೊಣೆಗೇಡಿತನ ಪ್ರದರ್ಶಿಸುತ್ತಿದೆ ಎಂದು ದೂರಿದರು.
ಬಳಿಕ ಚನ್ನಮ್ಮ ವೃತ್ತದಿಂದ ಡಿಸಿ ಕಚೇರಿಗೆ ತೆರಳಿ, ಕೂಡಲೇ ಪ್ರಕರಣದಲ್ಲಿ ಮಧ್ಯ ಪ್ರವೇಶ ಮಾಡಿ ಹೋರಾಟಗಾರರ ಬೇಡಿಕೆಗಳನ್ನು ಆಲಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲು ಆಗ್ರಹಿಸಿ ಮನವಿ ಸಲ್ಲಿಸಿದರು.
ನಿವೃತ್ತ ಪ್ರಾಂಶುಪಾಲ ಪ್ರೊ.ಎಸ್.ಜಿ.ಚಿಕ್ಕನರಗುಂದ, ಜಿ.ವಿ.ಕುಲಕರ್ಣಿ, ಡಾ.ಕೆ.ಎಸ್.ಜನಾರ್ಧನ, ಎಚ್.ಎಸ್.ದುಂಡಿ, ವಿದ್ಯಾರ್ಥಿಗಳಾದ ಅಂಕುಶ ಪಾಟೀಲ,  ಗಜಾನಂದ, ಅಶ್ವಿನಿ ಯಕ್ಕಮ್ಮವರ, ಭೂಮಿಕಾ ರಾಥೋಡ್ ಇತರರಿದ್ದರು.

Spread the love

About Laxminews 24x7

Check Also

ಒಂದೇ ದಿನ ಚಿತ್ರದುರ್ಗದಲ್ಲಿ ನಾಲ್ವರು ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

Spread the loveಚಿತ್ರದುರ್ಗ: ಚಿತ್ರದುರ್ಗದಲ್ಲಿ  ಬೀದಿ ನಾಯಿಗಳ (Stray Dog Attack) ದಾಳಿ ಮತ್ತೆ ಆತಂಕ ಮೂಡಿಸಿದೆ. ನಗರದ ಚೇಳಗುಡ್ಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ