Breaking News

2 ಷರತ್ತುಗಳನ್ನ ಒಪ್ಪಿದ್ರೆ ಸೋನಂ ವಾಂಗ್ಚುಕ್ ಉಪವಾಸ ಅಂತ್ಯಗೊಳಿಸ್ತಾರೆ: ಪತ್ನಿ ಗೀತಾಂಜಲಿ

Spread the love

ನವದೆಹಲಿ: ಸಾಮಾಜಿಕ, ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್  ತಮ್ಮ ಉಪವಾಸ ಸತ್ಯಾಗ್ರಹವನ್ನ ಸೋಮವಾರ (ಜುಲೈ 20) ಅಂತ್ಯಗೊಳಿಸಲು ಸಿದ್ಧರಾಗಿದ್ದಾರೆ. ಆದರೆ, ಅದಕ್ಕೂ ಮುನ್ನ 2 ಪ್ರಮುಖ ಷರತ್ತುಗಳನ್ನ ಈಡೇರಿಸಬೇಕೆಂದು ಅವರ ಪತ್ನಿ ಗೀತಾಂಜಲಿ ಆಂಗ್ಮೋ ತಿಳಿಸಿದರು.

ದೆಹಲಿಯ ಜಂತರ್‌ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನಾ ವೇದಿಕೆಯಲ್ಲಿ ಮಾತನಾಡಿದ ಗೀತಾಂಜಲಿ, ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಶಿಕ್ಷಣ ಕ್ಷೇತ್ರದ ಜವಾಬ್ದಾರಿತನದ ಪ್ರಶ್ನೆಯನ್ನ ರಾಜಕೀಯ ಪಕ್ಷಗಳು ಪ್ರಸ್ತಾಪಿಸುವ ಭರವಸೆ ನೀಡಿದರೆ ಮಾತ್ರ ಸೋನಂ ವಾಂಗ್‌ಚುಕ್‌ ಉಪವಾಸ ಅಂತ್ಯಗೊಳಿಸಲಿದ್ದಾರೆ ಎಂದು ಹೇಳಿದರು.

Sonam Wangchuk 1

ಸಫ್ದರ್‌ಜಂಗ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋನಂ ವಾಂಗ್‌ಚುಕ್‌ ಅವರನ್ನು ವಿವಿಧ ರಾಜಕೀಯ ಪಕ್ಷಗಳ ನಾಯಕರು ಭೇಟಿ ಮಾಡಿ, ಶಿಕ್ಷಣದ ಜವಾಬ್ದಾರಿತನದ ವಿಷಯವನ್ನು ಸಂಸತ್ತಿನಲ್ಲಿ ಎತ್ತುವುದಾಗಿ ಭರವಸೆ ನೀಡಬೇಕು. ಈ ಷರತ್ತು ಈಡೇರಿದರೆ ಸೋಮವಾರವೇ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಸಂಸದ್’ ಪ್ರತಿಭಟನೆ ಶಾಂತಿಯುತವಾಗಿರಲಿ
ಇನ್ನೂ ಸೋಮವಾರ ನಡೆಯಲಿರುವ ‘ಚಲೋ ಸಂಸದ್’ ಪ್ರತಿಭಟನೆ ಕುರಿತು ಮಾತನಾಡಿ, ಪ್ರತಿಭಟನೆ ಸಂಪೂರ್ಣ ಶಾಂತಿಯುತವಾಗಿರಬೇಕು ಎಂದು ಸೋನಂ ವಾಂಕ್ಚುಕ್‌ ಸಂದೇಶ ನೀಡಿದ್ದಾರೆ. ಅಲ್ಲದೇ ಎಲ್ಲರೂ ಜವಾಬ್ದಾರಿಯಿಂದ ವರ್ತಿಸುವಂತೆ ಹೇಳಿದ್ದಾರೆಂದು ತಿಳಿಸಿದರು.

ಈ ಪ್ರತಿಭಟನೆ ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭವಾಗುವ ದಿನವೇ ನಡೆಯಲಿದ್ದು, ಅಧಿವೇಶನ ಆಗಸ್ಟ್‌ 13 ರ ವರೆಗೆ ಮುಂದುವರಿಯಲಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ