Breaking News

ನಿರ್ಮಲಾ ಸೀತಾರಾಮನ್ ಡೀಪ್‌ಫೇಕ್ ವಿಡಿಯೊ ನಂಬಿ 6.88 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ!

Spread the love

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಡೀಪ್‌ಫೇಕ್ ವಿಡಿಯೊ ಬಳಸಿಕೊಂಡು ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ 6.88 ಲಕ್ಷ ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ನಾರಾಯಣಪುರ ನಿವಾಸಿಯಾದ 66 ವರ್ಷದ ವ್ಯಕ್ತಿಗೆ, ಕೇಂದ್ರ ಸರ್ಕಾರ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜಂಟಿಯಾಗಿ ಹೂಡಿಕೆ ಯೋಜನೆ ಆರಂಭಿಸಿರುವಂತೆ ತೋರಿಸುವ ವಿಡಿಯೊ ಫೇಸ್‌ಬುಕ್‌ನಲ್ಲಿ ಕಾಣಿಸಿಕೊಂಡಿತ್ತು. ಅದರಲ್ಲಿ ಹೂಡಿಕೆ ಮಾಡಿದರೆ ಕಡಿಮೆ ಅವಧಿಯಲ್ಲಿ ಉತ್ತಮ ಲಾಭ ಸಿಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ಮಾತನಾಡಿರುವಂತೆ ಡೀಪ್ ಪೇಕ್ ತಂತ್ರಜ್ಞಾನದ ಮೂಲಕ ತೋರಿಸಲಾಗಿತ್ತು.

ವಿಡಿಯೊದಲ್ಲಿದ್ದ ಲಿಂಕ್‌ ಅನ್ನು ಕ್ಲಿಕ್ ಮಾಡಿದ ವ್ಯಕ್ತಿ ತನ್ನ ಕೆವೈಸಿ ಸೇರಿದಂತೆ ಅಗತ್ಯ ಮಾಹಿತಿಯನ್ನು ದಾಖಲಿಸಿದ್ದರು. ಬಳಿಕ ಯುಕೆ (+44) ಕೋಡ್‌ನ ವಾಟ್ಸ್‌ಆ್ಯಪ್ ಸಂಖ್ಯೆಯಿಂದ ಕರೆ ಬಂದಿದ್ದು, 22 ಸಾವಿರ ರೂ. ಹೂಡಿಕೆಯ ಬದಲು 6 ಲಕ್ಷ ರೂ.ಗಿಂತ ಹೆಚ್ಚು ಹೂಡಿಕೆ ಮಾಡಿದರೆ ಕೇವಲ 10 ದಿನಗಳಲ್ಲಿ 15 ಲಕ್ಷ ರೂ. ವಾಪಸ್ ಸಿಗುತ್ತದೆ ಎಂದು ನಂಬಿಸಲಾಗಿದೆ.

ಸರ್ಕಾರಿ ಯೋಜನೆ ಎಂದು ನಂಬಿ ಮೋಸಹೋದ ವ್ಯಕ್ತಿ

ಸರ್ಕಾರಿ ಯೋಜನೆ ಎಂಬ ನಂಬಿಕೆಯಿಂದ ನಾರಾಯಣಪುರ ನಿವಾಸಿಯು ಮಾರ್ಚ್‌ನಿಂದ ಜೂನ್‌ವರೆಗೆ ಒಟ್ಟು 6.88 ಲಕ್ಷ ರೂ. ಹಣವನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಿದ್ದಾರೆ. ಆದರೆ ಯಾವುದೇ ಹಣ ಮರಳಿ ಬರದ ಹಿನ್ನೆಲೆಯಲ್ಲಿ ತಾವು ವಂಚನೆಗೆ ಒಳಗಾಗಿರುವುದು ಗೊತ್ತಾಗಿ ಈಶಾನ್ಯ ವಿಭಾಗದ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಡೀಪ್‌ಫೇಕ್ ವಿಡಿಯೊಗಳಿಂದ ಎಚ್ಚರ!

ರಾಜಕಾರಣಿಗಳು, ನಟರು ಅಥವಾ ಗಣ್ಯರ ಮುಖ ಮತ್ತು ಧ್ವನಿಯನ್ನು ಕೃತಕ ಬುದ್ಧಿಮತ್ತೆ ಬಳಸಿ ನೈಜ ಎಂಬಂತೆ ಬಿಂಬಿಸಿ ಜನರನ್ನು ವಂಚಿಸುವ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿವೆ ಎಂದು ಸೈಬರ್ ತಜ್ಞರು ಹೇಳಿದ್ದಾರೆ. ಸರ್ಕಾರ ಅಥವಾ ಬ್ಯಾಂಕ್ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕಾಣುವ ಹೂಡಿಕೆ ಯೋಜನೆಗಳನ್ನು ಪರಿಶೀಲಿಸದೆ ಹಣ ಹೂಡಿಕೆ ಮಾಡಬಾರದು. ಅನುಮಾನಾಸ್ಪದ ಲಿಂಕ್‌ಗಳನ್ನು ಕ್ಲಿಕ್ ಮಾಡದಿರುವುದು ಹಾಗೂ ಅಧಿಕೃತ ವೆಬ್‌ಸೈಟ್‌ಗಳಲ್ಲಿಯೇ ಮಾಹಿತಿ ಪರಿಶೀಲಿಸುವುದು ಸುರಕ್ಷಿತ ಎಂದು ಅವರು ಸಲಹೆ ನೀಡಿದ್ದಾರೆ.


Spread the love

About Laxminews 24x7

Check Also

ಬ್ಯಾಲೆಟ್ ಪೇಪರ್‌ನಲ್ಲೇ ಕಾಂಗ್ರೆಸ್ ಸೋತಿದೆ, ಪತನದ ದಿನಗಳು ಹತ್ತಿರ ಬರ್ತಿದೆ: ನಿಖಿಲ್ ಕುಮಾರಸ್ವಾಮಿ

Spread the loveರಾಮನಗರ: ಕಾಂಗ್ರೆಸ್  ಇವಿಎಂ ಮೇಲೆ ಅನುಮಾನ ಪಟ್ಟು, ಬ್ಯಾಲೆಟ್ ಪೇಪರ್  ಚುನಾವಣೆ ಬೇಕು ಅಂತಿದ್ದರು. ಈಗ ಬ್ಯಾಲೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ