Breaking News

RSSಗೆ ಪ್ರಿಯಾಂಕ್ ಖರ್ಗೆ ಅವಹೇಳನ ಪ್ರಕರಣ – ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಿಂದ ಮತ್ತೆ ಸಮನ್ಸ್

Spread the love

ಬೆಂಗಳೂರು: ಆರ್‌ಎಸ್‌ಎಸ್  ವಿರುದ್ಧ ಗೃಹಸಚಿವ ಪ್ರಿಯಾಂಕ್ ಖರ್ಗೆ  ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮತ್ತೆ ಸಮನ್ಸ್ ಜಾರಿ ಮಾಡಿದೆ.

ಆರ್‌ಎಸ್‌ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ತೇಜಸ್ ಗೌಡ ಎಂಬುವವರು ಕಳೆದ ವರ್ಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ರು. ಈ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದು, ಇಂದು ಗೃಹಸಚಿವ ಪ್ರಿಯಾಂಕ್ ಖರ್ಗೆ, ಮಹಮ್ಮದ್ ನಲಪಾಡ್ ಖುದ್ದು ಹಾಜರಾತಿಗೆ ಕೋರ್ಟ್ ಸೂಚಿಸಿತ್ತು. ಆದರೆ ಇವರ ಬದಲಾಗಿ ಸದಾಶಿವನಗರ ಪೊಲೀಸರು, ಅಶೋಕ್ ನಗರ ಪೊಲೀಸರು ಹಾಜರಾಗಿ ನ್ಯಾಯಾಲಯಕ್ಕೆ ವರದಿ ಸಲ್ಲಿಕೆ ಮಾಡಿದ್ರು.

ವರದಿ ಪರಿಶೀಲನೆ ನಡೆಸಿದ ನ್ಯಾಯಾಧೀಶರು ವರದಿ ತೃಪ್ತಿಕರವಾಗಿಲ್ಲ ಅಂತಾ ಅಭಿಪ್ರಾಯ ವ್ಯಕ್ತಪಡಿಸಿ, ಗೃಹಸಚಿವ ಪ್ರಿಯಾಂಕ್ ಖರ್ಗೆ, ಮಹಮ್ಮದ್ ನಲಪಾಡ್ ಮತ್ತೆ ಆಗಸ್ಟ್ 01ರಂದು ಕೋರ್ಟ್‌ಗೆ ಹಾಜರಾಗುವಂತೆ ಮರು ಸಮನ್ಸ್ ಜಾರಿ ಮಾಡಿದೆ.


Spread the love

About Laxminews 24x7

Check Also

ಶಿವಾಜಿನಗರದಲ್ಲಿ GBA ಅಧಿಕಾರಿಗಳ ಮೇಲೆ ಹಲ್ಲೆ; ಬೆಳಗ್ಗೆಯೇ ದಾಳಿ ಪ್ಲಾನ್, 11 ಮಂದಿ ಅರೆಸ್ಟ್

Spread the loveಬೆಂಗಳೂರು: ಶಿವಾಜಿನಗರದಲ್ಲಿ  ಫುಟ್‌ಪಾತ್ ತೆರವು ಕಾರ್ಯಾಚರಣೆ ವೇಳೆ GBA ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ