Breaking News

ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಪತಿ ನೇಣಿಗೆ ಶರಣು

Spread the love

ಮೈಸೂರು : ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಆಘಾತ ಮೂಡಿಸಿದೆ. ಸಾಲದ ಒತ್ತಡವೇ ಈ ದುರಂತಕ್ಕೆ ಕಾರಣವೇ ಎಂಬ ಅನುಮಾನ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮೈಸೂರು ಜಿಲ್ಲೆಯ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಲೆ ಮಾಡಿದ ಬಳಿಕ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.

ಹರೀಶ್ (49), ಪತ್ನಿ ನಿಶ್ಚಿತ (36), ಪುತ್ರಿಯರಾದ ನೆಕ್ಸಾ (13) ಮತ್ತು ರಕ್ಷಾ (6) ಮೃತ ದುರ್ದೈವಿಗಳು. ಹರೀಶ್ ಮೊದಲು ಪತ್ನಿ ಹಾಗೂ ಇಬ್ಬರು ಮಕ್ಕಳ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಬಳಿಕ ಮನೆಯ ಮೊದಲ ಮಹಡಿಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹುಣಸೂರು ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮನೆಯಲ್ಲಿ ಡೆತ್‌ನೋಟ್ ಕೂಡ ಪತ್ತೆಯಾಗಿದ್ದು, ಅದರಲ್ಲಿ ನಾನು ಮೇಲಿನ ಮಹಡಿಯ ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದೇನೆ) ಹರೀಶ್‌ ಬರೆದಿದ್ದಾನೆ. ಸಾಲದ ಒತ್ತಡ ಹಾಗೂ ಆಸ್ತಿ ಸಂಬಂಧ ಕೆಲವು ವಿವರಗಳನ್ನು ಬರೆದಿರುವುದು ಬೆಳಕಿಗೆ ಬಂದಿದೆ. ಜೊತೆಗೆ ಎಲ್ಲಾ ದಾಖಲೆಗಳು ಲಾಕರ್‌ನಲ್ಲಿ ಇವೆ ಎಂದು ಉಲ್ಲೇಖಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ


Spread the love

About Laxminews 24x7

Check Also

ಬ್ಯಾಲೆಟ್ ಪೇಪರ್‌ನಲ್ಲೇ ಕಾಂಗ್ರೆಸ್ ಸೋತಿದೆ, ಪತನದ ದಿನಗಳು ಹತ್ತಿರ ಬರ್ತಿದೆ: ನಿಖಿಲ್ ಕುಮಾರಸ್ವಾಮಿ

Spread the loveರಾಮನಗರ: ಕಾಂಗ್ರೆಸ್  ಇವಿಎಂ ಮೇಲೆ ಅನುಮಾನ ಪಟ್ಟು, ಬ್ಯಾಲೆಟ್ ಪೇಪರ್  ಚುನಾವಣೆ ಬೇಕು ಅಂತಿದ್ದರು. ಈಗ ಬ್ಯಾಲೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ