Breaking News

ಕಾಫಿನಾಡಲ್ಲಿ ಕಾಡುಕೋಣ ದಾಳಿಗೆ ಮತ್ತೊಂದು ಬಲಿ – 15 ದಿನಗಳ ಅಂತರದಲ್ಲಿ ಇಬ್ಬರು ಸಾವು

Spread the love

ಚಿಕ್ಕಮಗಳೂರು: ಕಾಡುಕೋಣ ದಾಳಿಗೆ ಕಾಫಿನಾಡಲ್ಲಿ ಮತ್ತೊಂದು ಬಲಿಯಾಗಿದೆ. ಈ ಮೂಲಕ 15 ದಿನಗಳ ಅಂತರದಲ್ಲಿ ಎರಡನೇ ಬಲಿ ಇದಾಗಿದೆ.

ಕೊಪ್ಪ ತಾಲೂಕಿನ ದೋಣಿಹಡ್ಲು ಗ್ರಾಮದ ಮಂಜುನಾಥ್ (45) ಕಾಡುಕೋಣ ದಾಳಿಗೆ ಬಲಿಯಾದ ದುರ್ದೈವಿ. ಮನೆಯಿಂದ ತೋಟಕ್ಕೆ ಹೋಗುವಾಗ ಕಾಡುಕೋಣ ಏಕಾಏಕಿ ದಾಳಿ ನಡೆಸಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಲಾಯಿತು. ಆದರೆ ಮಾರ್ಗ ಮಧ್ಯೆಯೇ ಅವರು ಸಾವನ್ನಪ್ಪಿದ್ದಾರೆ.

ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಿರಂತರ ಕಾಡುಕೋಣ ದಾಳಿಯಿಂದ ಸರ್ಕಾರದ ವಿರುದ್ಧ ಮಲೆನಾಡಿಗರು ಆಕ್ರೋಶ ಹೊರಹಾಕಿದ್ದಾರೆ. ಜುಲೈ 7ರಂದು ಕಳಸದಲ್ಲಿ ಕಾಡುಕೋಣ ದಾಳಿಗೆ 52 ವರ್ಷದ ಶೀಲಾ ಎಂಬ ಮಹಿಳೆ ಬಲಿಯಾಗಿದ್ದರು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ