Breaking News

ಕೇಂದ್ರ ಗೃಹ ಸಚಿವ ಅಮಿತ್ ಶಾ ಹುಬ್ಬಳ್ಳಿ ಪ್ರವಾಸ ದಿಢೀರ್ ರದ್ದು

Spread the love

ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ  ಅವರ ಹುಬ್ಬಳ್ಳಿ ಪ್ರವಾಸ ದಿಢೀರ್ ರದ್ದಾಗಿದೆ.

ಜುಲೈ 24ರಂದು ಹುಬ್ಬಳ್ಳಿಗೆ ಆಗಮಿಸಿ, ಜುಲೈ 25ರಂದು ಕೆಎಲ್‌ಇ ಮೆಡಿಕಲ್ ಕಾಲೇಜಿನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವ ವೇಳಾಪಟ್ಟಿ ನಿಗದಿಯಾಗಿತ್ತು. ಆದರೆ, ದೆಹಲಿಯಲ್ಲಿ ನಡೆದಿರುವ ಮಹತ್ವದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆ ಈ ಪ್ರವಾಸವನ್ನು ರದ್ದುಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಅಮಿತ್ ಶಾ ಅವರ ಭೇಟಿಗೆ ಸಂಬಂಧಿಸಿದಂತೆ ಭದ್ರತಾ ವ್ಯವಸ್ಥೆ ಪರಿಶೀಲನೆಗಾಗಿ ಈಗಾಗಲೇ ಅವರ ಸಿಬ್ಬಂದಿ ಹುಬ್ಬಳ್ಳಿಗೆ ಆಗಮಿಸಿ ಸಿದ್ಧತೆ ನಡೆಸುತ್ತಿದ್ದರು. ಸದ್ಯ ಪ್ರವಾಸ ರದ್ದಾದ ಹಿನ್ನೆಲೆ ಜುಲೈ 25ರಂದು ನಡೆಯಬೇಕಿದ್ದ ಕೆಎಲ್‌ಇ ಮೆಡಿಕಲ್ ಕಾಲೇಜಿನ ಉದ್ಘಾಟನಾ ಕಾರ್ಯಕ್ರಮವೂ ಮುಂದೂಡಲಾಗಿದೆ. ಪ್ರವಾಸಕ್ಕೆ ಹೊಸ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ