Breaking News

ರಾಜ್ಯದಲ್ಲಿ ಬರ ತಾಂಡವ; ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ 2,800 ರೈತರ ಆತ್ಮಹತ್ಯೆ: ಆರ್. ಅಶೋಕ್

Spread the love

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ತಾಂಡವ ಆಡ್ತಿದೆ. ಆದರೆ ಸರ್ಕಾರ ಸಮರ್ಪಕ ಕ್ರಮ ಕೈಗೊಂಡಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ 2,800 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್  ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಬೆಂಗಳೂರಿನ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು, ಶಾಸಕರು ದೆಹಲಿಯಲ್ಲಿ ಜಾಲಿ ಅಂತ ಟ್ರಿಪ್ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಶೇ.80ರಷ್ಟು ಕೃಷಿ ಚಟುವಟಿಕೆ ಸ್ಥಗಿತಗೊಂಡಿದೆ. ಮಳೆ ಕೊರತೆಯಿಂದ ಬೆಳೆಗಳು ಒಣಗುತ್ತಿವೆ. ಜಾನುವಾರುಗಳಿಗೆ ಮೇವು ಸಿಗುತ್ತಿಲ್ಲ. ರೈತರು ದನ-ಕರುಗಳನ್ನು ಮಾರಾಟ ಮಾಡುವ ಪರಿಸ್ಥಿತಿ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ಮತ್ತು ಡಿಸಿಎಂ ಬೆಳೆ ಬೆಳೆಯಬೇಡಿ ಎನ್ನುತ್ತಿದ್ದಾರೆ. ಹಾಗಾದರೆ ರೈತರು ಏನು ಮಾಡಬೇಕು? ರೈತರಿಗೆ ಸಾರ್ವತ್ರಿಕ ರಜೆ ಘೋಷಣೆ ಮಾಡುತ್ತೀರಾ ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌ ಬಿಜೆಪಿ ನೋಡಿ ಕಲಿಬೇಕು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಂಡು ಪರಿಹಾರ ನೀಡಲಾಗಿತ್ತು. ಈಗ ಸರ್ಕಾರ ಬರ ಘೋಷಣೆ ಮಾಡುವಲ್ಲಿಯೂ ವಿಳಂಬ ಮಾಡುತ್ತಿದೆ ಎಂದು ಟೀಕಿಸಿದರು.

ಕೇಂದ್ರದ ಮಾರ್ಗಸೂಚಿ ಪ್ರಕಾರ ರಾಜ್ಯದಲ್ಲಿ ಮಳೆ ಕೊರತೆ ಇದ್ದರೂ ಇನ್ನೂ ಬರ ಘೋಷಣೆ ಮಾಡಿಲ್ಲ. ಬರ ಘೋಷಿಸಿದರೆ ಮಾತ್ರ ಕೇಂದ್ರದಿಂದ ನೆರವು ಸಿಗಲಿದೆ. ಆದರೆ ಸರ್ಕಾರ ಅದಕ್ಕೂ ಮುಂದಾಗುತ್ತಿಲ್ಲ ಎಂದು ಆರೋಪಿಸಿದರು.

ರಾಜ್ಯದ ಹಲವು ಕೆರೆಗಳು ಸಂಪೂರ್ಣ ಬತ್ತಿವೆ. ವಿದ್ಯುತ್ ಕೊರತೆಯೂ ಎದುರಾಗಿದೆ. ರೈತರಿಗೆ ಬೋರ್‌ವೆಲ್‌ಗಳಿಗೆ ವಿದ್ಯುತ್ ಸಿಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ತಕ್ಷಣ ಬರ ಘೋಷಿಸಿ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿ ತಾಲ್ಲೂಕಿಗೆ ಬರ ನಿರ್ವಹಣೆಗೆ 20 ಕೋಟಿ ರೂ ಬಿಡುಗಡೆ ಮಾಡಬೇಕು. ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು. ಸಾಲಮನ್ನಾ ಘೋಷಿಸಬೇಕು. ಬೇರೆ ರಾಜ್ಯಗಳಿಗೆ ನೀರು ಬಿಡುವುದನ್ನು ತಡೆಯಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು.


Spread the love

About Laxminews 24x7

Check Also

ಶಿವಾಜಿನಗರದಲ್ಲಿ GBA ಅಧಿಕಾರಿಗಳ ಮೇಲೆ ಹಲ್ಲೆ; ಬೆಳಗ್ಗೆಯೇ ದಾಳಿ ಪ್ಲಾನ್, 11 ಮಂದಿ ಅರೆಸ್ಟ್

Spread the loveಬೆಂಗಳೂರು: ಶಿವಾಜಿನಗರದಲ್ಲಿ  ಫುಟ್‌ಪಾತ್ ತೆರವು ಕಾರ್ಯಾಚರಣೆ ವೇಳೆ GBA ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ