ವ್ಯಾಪಕ ಮಳೆಯಿಂದಾಗಿ ಕೃಷ್ಣಾ, ವೇದಗಂಗಾ ಮತ್ತು ದೂಧಗಂಗಾ ನದಿ ನೀರಿನ ಮಟ್ಟ ಹೆಚ್ಚಿದೆ.
ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದ ಕೊಯ್ನಾದಲ್ಲಿ ೬೭ ಮಿಮೀ, ನವಜಾದಲ್ಲಿ ೮೫ ಮಿಮೀ ಮತ್ತು ಮಹಾಬಲೇಶ್ವರದಲ್ಲಿ ೭೮ ಮಿಮೀ. ಮಳೆಯಾಗಿದೆ. ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜ್‌ನಿಂದ ಕೃಷ್ಣಾ ನದಿಗೆ 48 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ, ಜೊತೆಗೆ ವೇದಗಂಗಾ ಮತ್ತು ದೂಧಗಂಗಾ ನದಿ ನೀರು ಸೇರಿ ಚಿಕ್ಕೋಡಿ ತಾಲೂಕಿನ ಕಲ್ಲೋಳ ಬ್ಯಾರೇಜ್ ಬಳಿ ಕೃಷ್ಣಾ ನದಿಗೆ ಮಂಗಳವಾರ ಒಟ್ಟು 60 ಸಾವಿರ ಕ್ಯೂಸೆಕ್ ಒಳ ಹರಿವು ಸೇರಿದೆ.
Laxmi News 24×7