Breaking News

ಕಾಂಗ್ರೆಸ್‌ನಿಂದ ಗೂಂಡಾಗಿರಿ – ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ ಬಿಜೆಪಿ ನಿಯೋಗ

Spread the love

ಬೆಂಗಳೂರು: ಕಾಂಗ್ರೆಸ್  ಕಚೇರಿ ಎದುರು ತಮ್ಮ ಮೇಲೆ ನಡೆದ ಹಲ್ಲೆ ಖಂಡಿಸಿ ಬಿಜೆಪಿ  ನಾಯಕರು ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.

ಹೈಗ್ರೌಂಡ್ಸ್ ಠಾಣೆಯಿಂದ ಪಾದಯಾತ್ರೆ ಮಾಡಿಕೊಂಡು ಕಮೀಷನರ್ ಕಚೇರಿಗೆ ಆಗಮಿಸಿದ ಬಿಜೆಪಿ ನಾಯಕರು ದೂರು ನೀಡಿದ್ದಾರೆ. ಕಾಂಗ್ರೆಸ್‌ನವರು ಗೂಂಡಾಗಿರಿ ಮಾಡುತ್ತಿದ್ದಾರೆ. ಕಾಂಗ್ರೆಸ್ ಎದುರು ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಕೈಬರಹದಲ್ಲಿಯೇ ದೂರು ನೀಡಿದ್ದಾರೆ. ಈ ವೇಳೆ ಆಯುಕ್ತರ ಕಚೇರಿ ಎದುರು ಧಿಕ್ಕಾರ ಘೋಷಣೆ ಕೂಗಿದ್ದಾರೆ.

ಅಶ್ವಥ್ ನಾರಾಯಣ, ಬಿಪಿ ಹರೀಶ್, ಸಿಕೆ ರಾಮಮೂರ್ತಿ, ಎಸ್ ಹರೀಶ್ ಮೇಲೆ ಮೊಟ್ಟೆ, ದೊಣ್ಣೆ, ರಾಡ್‌ಗಳಿಂದ ಹಲ್ಲೆ ನಡೆಸಿರುವುದಾಗಿ ಆರೋಪಿಸಿದ್ದಾರೆ.

ದೂರಿನಲ್ಲಿ ಏನಿದೆ?
ಹರಿಹರ ಶಾಸಕ ಬಿ.ಪಿ. ಹರೀಶ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆಯಿಂದ ಹಲ್ಲೆ ಮಾಡಿದ್ದಾರೆ. ಅನೇಕ ಮೊಟ್ಟೆಗಳಿಂದ ಹರೀಶ್ ತಲೆಗೆ ಹೊಡೆದು ಅವರನ್ನು ಎತ್ತಿಕೊಂಡು ಹೋಗುವ ಸಾಹಸಕ್ಕೆ ಕೈ ಹಾಕಿದ್ದಾರೆ. ಅಲ್ಲದೇ ನಮ್ಮನ್ನು ಬಂಧಿಸಿ ಕರೆತರುತ್ತಿದ್ದ ಬಸ್ಸಿಗೆ ದೊಣ್ಣೆ, ರಾಡ್‌ನಿಂದ ಹೊಡೆದಿದ್ದಾರೆ. ಬಸ್ಸಿನಲ್ಲಿ ಒಟ್ಟಿಗೆ ಸೇರಿ ಧಿಕ್ಕಾರ ಹಾಕಿದರೂ ಕೂಡ ನಮ್ಮ ಕಾರ್ಯಕರ್ತ ಪ್ರಶಾಂತ್‌ಗೆ ರಾಡ್‌ನಿಂದ ಹೊಡೆದಿದ್ದಾರೆ.

ಮಾಜಿ ಡಿಸಿಎಂ ಅಶ್ವಥ್ ನಾರಾಯಣ ಅವರಿಗೆ ಮೊಟ್ಟೆಯಿಂದ, ಶಾಸಕ ಸಿಕೆ ರಾಮಮೂರ್ತಿ ಅವರಿಗೆ ರಾಡ್‌ನಿಂದ ಹೊಡೆದಿದ್ದಾರೆ. ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಹರೀಶ್ ಅವರಿಗೆ ದೊಣ್ಣೆ ಮತ್ತು ಪೈಪ್‌ಗಳಿಂದ ಹೊಡೆದಿದ್ದಾರೆ. ಕಾರ್ಯಕರ್ತ ಪವನ್ ಮೇಲೆ ಹಲ್ಲೆ ಮಾಡಿದ್ದಾರೆ. ಮೆರವಣಿಗೆ ಹೋಗುತ್ತಿದ್ದಾಗ ಕೆಲವರ ಮೇಲೆ ಹಲ್ಲೆಯಾಗಿದೆ. ಹೀಗಾಗಿ ತಕ್ಷಣ ಕಾನೂನು ಕ್ರಮ ತೆಗೆದುಕೊಂಡು ಆರೋಪಿಗಳನ್ನು ಬಂಧಿಸಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.


Spread the love

About Laxminews 24x7

Check Also

ಇನ್ಮುಂದೆ ಫುಟ್‌ಪಾತ್‌ನಲ್ಲಿ ಬೈಕ್ ಚಲಾಯಿಸಿದ್ರೆ 5,000 ರೂ. ದಂಡ: ಕೃಷ್ಣ ಬೈರೇಗೌಡ

Spread the loveಬೆಂಗಳೂರು: ಪಾದಾಚಾರಿ ಮಾರ್ಗದಲ್ಲಿ ಮೋಟಾರು ವಾಹನ ಚಲಾಯಿಸುವವರಿಗೆ ವಿಧಿಸುತ್ತಿದ್ದ ದಂಡದ  ಮೊತ್ತವನ್ನು 5,000 ರೂ.ಗಳಿಗೆ ಹೆಚ್ಚಿಸುವಂತೆ ಒತ್ತಾಯಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ