Breaking News

ಸಾಕು ನಾಯಿ ಹೊತ್ತೊಯ್ದ ಚಿರತೆ

Spread the love

ಮಡಿಕೇರಿ: ಕೊಡಗಿನ ಶನಿವಾರಸಂತೆ ಸಮೀಪದ ಹೊಸಗುತ್ತಿ ಗ್ರಾಮದಲ್ಲಿ ಕಾಣಿಸಿಕೊಂಡ ಚಿರತೆ ಹೊಂಚು ಹಾಕಿ ಸಾಕು ನಾಯಿಯನ್ನು ಹೊತ್ತೊಯ್ದಿರುವ ಘಟನೆ ನಡೆದಿದೆ.

ಇಂದು (ಬುಧವಾರ) ಮಧ್ಯಾಹ್ನ 3 ಗಂಟೆ ಸ್ಥಳೀಯ ನಿವಾಸಿ ಅರುಣ್‌ ಎಂಬುವವರ ಮನೆಯ ಸಮೀಪ ಚಿರತೆ  ಕಾಣಿಸಿಕೊಂಡಿದ್ದು, ಸಾಕು ನಾಯಿಯನ್ನು ಎಳೆದೊಯ್ದಿದೆ. ಈ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ  ಸೆರೆಯಾಗಿದೆ.

ಆಲೂರು ಸಿದ್ಧಾಪುರ ವ್ಯಾಪ್ತಿಯ ಆಲೂರು, ಮಾಲಂಬಿ, ಹೊಸಗುತ್ತಿ ಭಾಗಗಳಲ್ಲಿ ಕಳೆದ ಕೆಲ ದಿನಗಳಿಂದ ಚಿರತೆ ಒಡಾಟ ನಡೆಯುತ್ತಿದೆ. ರಾತ್ರಿ ವೇಳೆ ನಾಯಿಗಳು ಹಾಗೂ ದನದ ಕೊಟ್ಟಿಗೆಯಲ್ಲಿದ್ದ ಕರುಗಳನ್ನ ಹೊತ್ತೊಯ್ಯುತ್ತಿದ್ದ ಬಗ್ಗೆಯೂ ವರದಿಯಾಗುತ್ತಿದೆ.

ಇದು ಸಹಜವಾಗಿಯೇ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದು, ಅರಣ್ಯ ಇಲಾಖೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಇನ್ಮುಂದೆ ಫುಟ್‌ಪಾತ್‌ನಲ್ಲಿ ಬೈಕ್ ಚಲಾಯಿಸಿದ್ರೆ 5,000 ರೂ. ದಂಡ: ಕೃಷ್ಣ ಬೈರೇಗೌಡ

Spread the loveಬೆಂಗಳೂರು: ಪಾದಾಚಾರಿ ಮಾರ್ಗದಲ್ಲಿ ಮೋಟಾರು ವಾಹನ ಚಲಾಯಿಸುವವರಿಗೆ ವಿಧಿಸುತ್ತಿದ್ದ ದಂಡದ  ಮೊತ್ತವನ್ನು 5,000 ರೂ.ಗಳಿಗೆ ಹೆಚ್ಚಿಸುವಂತೆ ಒತ್ತಾಯಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ