Breaking News

ಹೆಣ್ಣೆಂದು ಸ್ವಂತ ಮಗುವನ್ನೇ ಸಂಪ್‌ಗೆ ಹಾಕಿ ಹತ್ಯೆಗೈದ ಪಾಪಿ ತಂದೆ

Spread the love

ಚಿಕ್ಕಬಳ್ಳಾಪುರ: ಹೆಣ್ಣೆಂದು ಸ್ವಂತ ಮಗುವನ್ನೇ ಸಂಪ್‌ಗೆ ಹಾಕಿ ಹತ್ಯೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ಶಾಂತಿನಗರದಲ್ಲಿ  ನಡೆದಿದೆ.

ತಂದೆ ಇಮ್ರಾನ್ ಹಾಗೂ ತಾಯಿ ಮುಸ್ಕಾನ್‌ಗೆ 13 ದಿನಗಳ ಹಿಂದೆ ಹೆಣ್ಣು ಜನಿಸಿತ್ತು. 

ಬುಧವಾರ ರಾತ್ರಿ (ಜು.22) ಆರೋಪಿ ಇಮ್ರಾನ್ ಮಲಗಿದ್ದ ಮಗುವನ್ನು ಎತ್ತಿಕೊಂಡು ಸಂಪ್‌ಗೆ ಹಾಕಿದ್ದಾನೆ. ಬಳಿಕ ತಾಯಿ ಎದ್ದು ಮಗು ಎಲ್ಲಿ ಎಂದು ಕೇಳಿದಾಗ ನನಗೆ ಗೊತ್ತಿಲ್ಲ ಎಂದು ಹೇಳಿದ್ದಾನೆ. ಆನಂತರ ಮನೆಯವರ ಜೊತೆ ಹುಡುಕಾಡುವ ನಾಟಕ ಆಡಿದ್ದಾನೆ.

ಕೊನೆಗೆ ಸಂಪ್ ನೀರು ಹೊರ ಹಾಕಿ ನೋಡಿದಾಗ ಮಗು ಶವವಾಗಿ ಪತ್ತೆಯಾಗಿದೆ. ಸದ್ಯ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪಾಪಿ ತಂದೆ ಇಮ್ರಾನ್‌ನನ್ನು ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ