Breaking News

ಕೋವಿಡ್​ 19: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 37,724 ಪ್ರಕರಣ ಪತ್ತೆ, 648 ಮಂದಿ ಸಾವು

Spread the love

ನವದೆಹಲಿ: ದೇಶದಲ್ಲಿ ಕೋವಿಡ್​ 19 ಸೋಂಕಿತ ಸಂಖ್ಯೆ ದಿನ ದಿನೇ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ37,724 ಹೊಸ ಕೇಸ್​ಗಳು ಬೆಳಕಿಗೆ ಬಂದಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ11,92,915ಕ್ಕೆ ಏರಿಕೆಯಾದ್ರೆ, 648 ಮಂದಿ ಒಂದೇ ದಿನ ಬಲಿಯಾಗಿದ್ದಾರೆ. ಸದ್ಯ ಇಲ್ಲಿಯವರೆಗೆ ಬಲಿಯಾದವರ ಸಂಖ್ಯೆ 28,732ಕ್ಕೆ ಬಂದು ನಿಂತಿದೆ.

11,18,043 ಮಂದಿ ಸೋಂಕಿತರ ಪೈಕಿ ಒಟ್ಟು ಗುಣಮುಖರಾದವರ ಸಂಖ್ಯೆ 7,53,050ಕ್ಕೆ ತಲುಪಿದೆ. ಪ್ರಸ್ತುತ ದೇಶದಲ್ಲಿನ್ನೂ 411133 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಇನ್ನು ಕರ್ನಾಟಕದಲ್ಲಿ ನಿನ್ನೆ ಒಂದೇ ದಿನಕ್ಕೆ 3,649 ಕೋವಿಡ್​-19 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ನಿನ್ನೆ ಸಾವನ್ನಪ್ಪಿದ್ದವರು 61 ಮಂದಿ.

https://youtu.be/I1U-UG-NHuk


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ