Breaking News

ಸಿಎ ವಿಭಾಗದ ವಿದ್ಯಾರ್ಥಿನಿಯರ ಅದ್ವಿತೀಯ ಸಾಧನೆ

Spread the love

ಬಾಗಲಕೋಟೆ, ಜು. 23: ಬಸವೇಶ್ವರ ಕಲಾ ಮಹಾವಿದ್ಯಾಲಯದ ಕಂಪ್ಯೂಟರ್ ಅಪ್ಲಿಕೇಶನ್ ವಿಭಾಗದ ವಿದ್ಯಾರ್ಥಿನಿಯರಾದ ಸನಾ ಬಾಳಿಕಾಯಿ ಹಾಗೂ ಸೃಷ್ಟಿ ಭೂಮನ್ನವರ ಅವರು ಬಾಗಲಕೋಟೆ ವಿಶ್ವವಿದ್ಯಾಲಯದ 2025–26ನೇ ಸಾಲಿನ ಬಿ.ಎ. 5ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ತಲಾ 99 ಅಂಕಗಳನ್ನು ಗಳಿಸಿ ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿನಿಯರ ಈ ಅತ್ಯುತ್ತಮ ಸಾಧನೆಗೆ ಬಿವಿವಿ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಸಿ. ಚರಂತಿಮಠ, ಗೌರವ ಕಾರ್ಯದರ್ಶಿ ಮಹೇಶ್ ಎನ್. ಅಥಣಿ, ಕಾಲೇಜು ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಗುರುಬಸವ ಸೂಳಿಭಾವಿ, ಆಡಳಿತ ಅಧಿಕಾರಿಗಳಾದ ವಿ. ಆರ್. ಶಿರೋಳ ಹಾಗೂ ಡಾ. ವಿ. ಎಸ್. ಕಟಗಿಹಳ್ಳಿಮಠ, ಪ್ರಾಚಾರ್ಯ ಎಸ್. ಆರ್. ಮೂಗನೂರಮಠ ಮತ್ತು ಕಂಪ್ಯೂಟರ್ ಅಪ್ಲಿಕೇಶನ್ ವಿಭಾಗದ ಮುಖ್ಯಸ್ಥರಾದ ನಟರಾಜ ಆರ್. ಇಂಗಳಗಿ ಹಾಗೂ ಎಂ. ಎಂ. ಕಂಬಿ ಅಭಿನಂದಿಸಿ, ಮುಂದಿನ ಶೈಕ್ಷಣಿಕ ಜೀವನದಲ್ಲಿಯೂ ಇದೇ ರೀತಿಯ ಸಾಧನೆ ಮುಂದುವರೆಯಲಿ ಎಂದು ಶುಭ ಹಾರೈಸಿದರು.


Spread the love

About Laxminews 24x7

Check Also

ಪಿಜಿಯಲ್ಲಿ ಸಿಲಿಂಡರ್ ಬ್ಲಾಸ್ಟ್ – 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

Spread the loveಬೆಂಗಳೂರು: ಪಿಜಿಯಲ್ಲಿ ಸಿಲಿಂಡರ್ ಸ್ಫೋಟಗೊಂಡ  ಪರಿಣಾಮ 10ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು  ಹೊರವಲಯದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ