Breaking News

ಪಾಲಿಕೆ ಅಧಿಕಾರಿ, ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದವರನ್ನು ಬಂಧಿಸುವಂತೆ ಆಗ್ರಹಿಸಿ ಮನವಿ

Spread the love

ಬೆಳಗಾವಿ:ಬೆಂಗಳೂರಿನ ಶಿವಾಜಿ ನಗರದಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಪಾಲಿಕೆ ಅಧಿಕಾರಿ, ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದವರನ್ನು ಬಂಧಿಸುವಂತೆ ಆಗ್ರಹಿಸಿ ಬುಧವಾರ ಬೆಳಗಾವಿ ಮಹಾನಗರ ಪಾಲಿಕೆ ಅಧಿಕಾರಿ, ಸಿಬ್ಬಂದಿ  ಪ್ರತಿಭಟನೆ ನಡೆಸಿದರು. ಬಳಿಕ ಆಯುಕ್ತರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ರಾಜ್ಯ ಸರ್ಕಾರದ ಸೂಕ್ತ ನಿರ್ದೇಶನ ಮೇರೆ ಪಾಲಿಕೆ ಕಂದಾಯ ವಿಭಾಗದ ಇಂಜಿನಿಯರ್, ಅಧಿಕಾರಿ, ಸಿಬ್ಬಂದಿ ವರ್ಗ ಒತ್ತುವರಿ ತೆರವುಕಾರ್ಯಾಚರಣೆ ಕೈಗೊಂಡಿದ್ದಾರೆ. ಆದರೆ, ಕೆಲ ಸಂಘಟನೆಗಳ ಸದಸ್ಯರು, ಬೀದಿ ಬದಿ ವ್ಯಾಪಾರಿಗಳು, ಕಟ್ಟಡಗಳ ಮಾಲೀಕರು ಸರ್ಕಾರಿ ನೌಕರರ ಮೇಲೆ ಮಾರಣಾಂತಿಕ ಹಲ್ಲೆ ನಡೆಸುತ್ತಿದ್ದಾರೆ. ಇದರಿಂದಾಗಿ ಸಾರ್ವಜನಿಕ ಸ್ಥಳಗಳಲ್ಲಿ ಪಾಲಿಕೆ ಸಿಬ್ಬಂದಿ ಕಾರ್ಯನಿರ್ವಹಿಸಲು ಹಿಂದೇಟು ಹಾಕುತ್ತಿದ್ದಾರೆ.
ರಾಜ್ಯಾದ್ಯಂತ ಮಹಾನಗರ ಪಾಲಿಕೆ ಸೇರಿ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ,ಸಿಬ್ಬಂದಿಗೆ ಸೂಕ್ತ ರಕ್ಷಣೆ ಒದಗಿಸಬೇಕು. ತೆರವು ಕಾರ್ಯಾಚರಣೆ ಕೈಗೊಳ್ಳುವ ಪೂರ್ವದಲ್ಲಿಯೇ ಆಯಾ ಪ್ರದೇಶದಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕು. ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಕೆಲಸವನ್ನು  ಸರ್ಕಾರ ಮಾಡಬೇಕು ಎಂದು ಮನವಿ ಮೂಲಕ ಒತ್ತಾಯಿಸಿದರು.
ಈಗಾಗಲೇ ಪಾಲಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿ ವರ್ಗದ ಮೇಲೆ ದೈಹಿಕ ಅಲ್ಲೆ, ಅವಾಚ್ಚ ಶಬ್ದಗಳಿಂದ ನಿಂದನೆ ಘಟನೆಗಳು ನಡೆಯುತ್ತಿದ್ದರು ಯಾವುದೇ ಕ್ರಮ ಆಗುತ್ತಿಲ್ಲ. ಒಂದು ವೇಳೆ ಸರ್ಕಾರವು ಹಲ್ಲೆಕೋರರ ಮೇಲೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಕರ್ತವ್ಯ ಬಹಿಷ್ಕರಿಸಿ ಧರಣಿ ನಡೆಸಲಾಗುವುದು ಎಂದು ಮನವಿ ಮೂಲಕ ಎಚ್ಚರಿಸಿದರು.
ಪಾಲಿಕೆ ಅಭಿವೃದ್ಧಿ ವಿಭಾಗದ ಉಪ ಆಯುಕ್ತೆ ಲಕ್ಷ್ಮೀ ಸುಳಗೇಕರ, ಸಾಗರ ಕಾಂಬಳೆ, ಎಸ್.ಎಸ್. ಪಾಟೀಲ, ಯಲ್ಲೇಶ ಎಲ್.ಬಿ., ಶ್ರೀಕಾಂತ ಐ. ಇತರರಿದ್ದರು.

Spread the love

About Laxminews 24x7

Check Also

ಡಿಸೆಂಬರ್ ಹೊತ್ತಿಗೆ ಕ್ವಿನ್ ಸಿಟಿಯಲ್ಲಿ 200 ಎಕರೆ ಸೆಮಿಕಂಡಕ್ಟರ್ ಪಾರ್ಕ್ ಆರಂಭ: ಎಂ.ಬಿ ಪಾಟೀಲ್

Spread the loveಬೆಂಗಳೂರು: ರಾಜ್ಯದಲ್ಲಿ ಸದ್ಯದಲ್ಲೇ ಜಾರಿಗೆ ಬರಲಿರುವ 2026-2031ರ ನೂತನ ವೈಮಾಂತರಿಕ್ಷ ಮತ್ತು ರಕ್ಷಣಾ ನೀತಿಯಲ್ಲಿ ಆಧುನಿಕ ಎಲೆಕ್ಟ್ರಾನಿಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ