Breaking News

ಅಕ್ರಮವಾಗಿ ಚಿಪ್ಪುಹಂದಿಯ ಚಿಪ್ಪು ಮಾರಾಟಕ್ಕೆ ಯತ್ನಿಸಿದ ವ್ಯಕ್ತಿ ಬಂಧನ

Spread the love

ಚಾಮರಾಜನಗರ: ತಾಲೂಕಿನ ಹೆಗ್ಗೋಠಾರ ಗ್ರಾಮದ ದೊಡ್ಡಬೆಟ್ಟದ ಬಳಿ ಅಕ್ರಮವಾಗಿ ಚಿಪ್ಪುಹಂದಿಯ ಚಿಪ್ಪುಗಳನ್ನು ಮಾರಾಟ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಚಾಮರಾಜನಗರ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ಆರೋಪಿಯನ್ನು ಬಂಧಿಸಿ, 2 ಕೆಜಿ 800 ಗ್ರಾಂ ಚಿಪ್ಪುಹಂದಿಯ ಚಿಪ್ಪು, 4 ನಾಡ ಬಂದೂಕು, ಮೋಟಾರ್ ಬೈಕ್, ಇನ್ನಿತರ ಬಂದೂಕಿಗೆ ಬಳಸುವ ವಸ್ತುಗಳನ್ನು ವಶಪಡಿಸಿಕೊಂಡಿದೆ.

27 ವರ್ಷದ ಮಹೇಶ ನಾಯಕ ಹೆಚ್ ಬಂಧಿತ ವ್ಯಕ್ತಿಯಾಗಿದ್ದಾನೆ. ಚಾಮರಾಜನಗರ ತಾಲೂಕಿನ ಹೆಗ್ಗೋಠಾರ ಗ್ರಾಮದ ಬಳಿ ಇರುವ ದೊಡ್ಡಬೆಟ್ಟದ ಬಳಿ ಮಹೇಶ ನಾಯಕನನ್ನು ವಶಕ್ಕೆ ಪಡೆಯಲಾಗಿದೆ.

ಕಾರ್ಯಾಚರಣೆಯಲ್ಲಿ ಅರಣ್ಯ ಘಟಕದ ಸಿಐಡಿ ಪೊಲೀಸ್ ಮಹಾನಿರ್ದೇಶಕರಾದ ಸಂಗೀತ ಜಿ, ಮಡಿಕೇರಿ ಸಿಐಡಿ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಪವನ್ ನೆಜ್ಜೂರು ಅವರ ಮಾರ್ಗದರ್ಶನದಲ್ಲಿ ಚಾಮರಾಜನಗರ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್ ಉಪನಿರೀಕ್ಷಕರಾದ ಯಾಸ್ಮೀನ್ ತಾಜ್, ಸಿಬ್ಬಂದಿ ಹೆಚ್.ಡಿ. ಸ್ವಾಮಿ, ನವೀನ್ ಕುಮಾರ್, ವೀರಭದ್ರಪ್ಪ, ಬಸವಯ್ಯ, ಪ್ರಸಾದ್, ಗೋವಿಂದನಾಯಕ ಮತ್ತು ರಾಜು ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.


Spread the love

About Laxminews 24x7

Check Also

ಡಿಸೆಂಬರ್ ಹೊತ್ತಿಗೆ ಕ್ವಿನ್ ಸಿಟಿಯಲ್ಲಿ 200 ಎಕರೆ ಸೆಮಿಕಂಡಕ್ಟರ್ ಪಾರ್ಕ್ ಆರಂಭ: ಎಂ.ಬಿ ಪಾಟೀಲ್

Spread the loveಬೆಂಗಳೂರು: ರಾಜ್ಯದಲ್ಲಿ ಸದ್ಯದಲ್ಲೇ ಜಾರಿಗೆ ಬರಲಿರುವ 2026-2031ರ ನೂತನ ವೈಮಾಂತರಿಕ್ಷ ಮತ್ತು ರಕ್ಷಣಾ ನೀತಿಯಲ್ಲಿ ಆಧುನಿಕ ಎಲೆಕ್ಟ್ರಾನಿಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ