Breaking News

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಕಠಿಣ ಕಾನೂನು: ಮಿಡ್‌ನೈಟ್‌ ಮೋದಿ ಸಂದೇಶ

Spread the love

ನವದೆಹಲಿ: ದೇಶಾದ್ಯಂತ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯಾಗುತ್ತಿರುವ ಪ್ರಕರಣಗಳ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಈ ಕುರಿತು ಗುರುವಾರ ತಡರಾತ್ರಿ ವಿಡಿಯೋ ಸಂದೇಶ ರವಾನಿಸಿರುವ ಪ್ರಧಾನಿ ನರೇಂದ್ರ ಮೋದಿ  ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಕಠಿಣ ಕಾನೂನು ಮತ್ತು ಶಿಕ್ಷೆ ಒದಗಿಸುವ ಹೊಸ ಮಸೂದೆ ಮಂಡಿಸಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಪ್ರಕಟಿಸಿದ್ದಾರೆ.

ರಾತ್ರಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಮೋದಿ ಈ ಹೊಸ ನಿಯಮಗಳು ಮತ್ತು ಕಠಿಣ ಕ್ರಮಗಳ ಕುರಿತು ಶುಕ್ರವಾರ ನಡೆಯಲಿರುವ ಕೇಂದ್ರ ಸಚಿವರ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಲಿದೆ ಎಂದು ತಿಳಿಸಿದರು.

ಸೋಮವಾರದಿಂದ ಸಂಸತ್ತಿನ ದ್ವಿತೀಯ ವಾರದ ಕಲಾಪಗಳು ಪ್ರಾರಂಭವಾಗುತ್ತಿದ್ದು, ಆದಷ್ಟು ಬೇಗ ಈ ಮಸೂದೆಯನ್ನು ಮಂಡಿಸಿ ಅಂಗೀಕರಿಸಲು ಪ್ರಯತ್ನಿಸಲಾಗುವುದು. ಈ ಪ್ರಕರಣಗಳ ತನಿಖೆ ಮತ್ತು ವಿಚಾರಣೆಯನ್ನು ಶೀಘ್ರವಾಗಿ ಮುಗಿಸಲು ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವ ನಿಬಂಧನೆಗಳಿರಲಿವೆ.

ಪ್ರಶ್ನೆಪತ್ರಿಕೆ ಸೋರಿಕೆ ಎಂಬುದು ಸಾಮಾನ್ಯ ವಿಷಯವಲ್ಲ. ಇದು ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ತೀವ್ರ ನೋವುಂಟು ಮಾಡುತ್ತದೆ ಎಂಬುದು ನನಗೂ ತಿಳಿದಿದೆ. ವಿದ್ಯಾರ್ಥಿಗಳ ಒಂದು ವರ್ಷ ವ್ಯರ್ಥವಾಗಬಾರದು ಎಂಬುದೇ ನಮ್ಮ ಮೊದಲ ಆದ್ಯತೆ ಎಂದು ತಿಳಿಸಿದರು.


Spread the love

About Laxminews 24x7

Check Also

ಡಿಸೆಂಬರ್ ಹೊತ್ತಿಗೆ ಕ್ವಿನ್ ಸಿಟಿಯಲ್ಲಿ 200 ಎಕರೆ ಸೆಮಿಕಂಡಕ್ಟರ್ ಪಾರ್ಕ್ ಆರಂಭ: ಎಂ.ಬಿ ಪಾಟೀಲ್

Spread the loveಬೆಂಗಳೂರು: ರಾಜ್ಯದಲ್ಲಿ ಸದ್ಯದಲ್ಲೇ ಜಾರಿಗೆ ಬರಲಿರುವ 2026-2031ರ ನೂತನ ವೈಮಾಂತರಿಕ್ಷ ಮತ್ತು ರಕ್ಷಣಾ ನೀತಿಯಲ್ಲಿ ಆಧುನಿಕ ಎಲೆಕ್ಟ್ರಾನಿಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ