Breaking News

ಬೆಂಗಳೂರಲ್ಲಿ 2ನೇ ಏರ್‌ಪೋರ್ಟ್‌ ನಿರ್ಮಾಣಕ್ಕೆ ಇಲ್ಲಿವರೆಗೂ ನಮಗೆ ಪ್ರಸ್ತಾವ ಸಲ್ಲಿಕೆಯಾಗಿಲ್ಲ: ಕೇಂದ್ರ

Spread the love

ಬೆಂಗಳೂರು: ರಾಜಧಾನಿಯಲ್ಲಿ 2ನೇ ಏರ್‌ಪೋರ್ಟ್‌ ನಿರ್ಮಾಣಕ್ಕೆ ಇಲ್ಲಿಯವರೆಗೂ ಪ್ರಸ್ತಾವ ಸಲ್ಲಿಕೆಯಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬೆಂಗಳೂರು ಕೇಂದ್ರ ಸಂಸದ ಪಿ.ಸಿ.ಮೋಹನ್ ಪ್ರಶ್ನೆ ಕೇಳಿದ್ದರು. ಪ್ರಶ್ನೆಗೆ ಕೇಂದ್ರ ನಾಗರಿಕ ವಿಮಾನಯಾನ ಖಾತೆಯ ರಾಜ್ಯ ಸಚಿವ ಮುರಳೀಧ‌ರ್ ಮೊಹೊಲ್ ಲಿಖಿತ ಉತ್ತರ ನೀಡಿದ್ದಾರೆ.

ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಸಂಬಂಧ ಕರ್ನಾಟಕ ಸರ್ಕಾರದ ಮನವಿಯ ಮೇರೆಗೆ ಮೂರು ಸ್ಥಳಗಳಲ್ಲಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಪೂರ್ವ ಕಾರ್ಯಸಾಧ್ಯತಾ ಅಧ್ಯಯನ ನಡೆಸಿತ್ತು. ಈ ಅಧ್ಯಯನ ವರದಿಯನ್ನು ರಾಜ್ಯ ಸರ್ಕಾರಕ್ಕೆ ಕೆಲವು ತಿಂಗಳ ಹಿಂದೆ ಕಳುಹಿಸಲಾಗಿತ್ತು. ಆ ಬಳಿಕ ರಾಜ್ಯ ಸರ್ಕಾರದಿಂದ ಯಾವುದೇ ಪ್ರಸ್ತಾವ ಬಂದಿಲ್ಲ ಎಂದು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ