ಧಾರವಾಡ: ಮಗನ ಸಾವಿನ ಸುದ್ದಿ ಕೇಳಿ ಆಘಾತದಿಂದ ತಾಯಿ ಕೂಡ ಸಾವನ್ನಪ್ಪಿರುವ ಘಟನೆ ಧಾರವಾಡ ನಗರದ ತೇಜಸ್ವಿನಗರದಲ್ಲಿ ನಡೆದಿದೆ.
ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮೆಹಬೂಬ್ ಸಾಬ್ ನದಾಫ್ (47) ಬುಧವಾರ ಬೆಳಗ್ಗೆ ಧಾರವಾಡ ನಗರದ ರಾಜೀವ್ ಗಾಂಧಿನಗರದ ಬಳಿ ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದರು. ರೈಲ್ವೆ ಪೊಲೀಸರು ಸಂಜೆ ಮೆಹಬೂಬ್ ಶವ ಮರಣೋತ್ತರ ಪರೀಕ್ಷೆ ಮುಗಿಸಿ ಕೊಟ್ಟಿದ್ದರು.
ಸಂಜೆ ಏಳು ಗಂಟೆಗೆ ಮೆಹಬೂಬ್ ಅಂತ್ಯಕ್ರಿಯೆ ಮಾಡಲು ತಯಾರಿ ಮಾಡಿದ್ದರು. ಮನೆಯಿಂದ ಮಗನ ಅಂತ್ಯಕ್ರಿಯೆ ಮಾಡಲು ಮೃತದೇಹ ತೆಗೆದುಕೊಂಡು ಹೋಗುತಿದ್ದಂತೆ ತಾಯಿ ಮುಗುಟಬಿ ನದಾಫ್ (68) ಕೂಡ ಸಾವನ್ನಪ್ಪಿದ್ದಾರೆ. ಮಗನ ಅಂತ್ಯಕ್ರಿಯೆ ಮುಗಿಸಿ ಬಂದು ಸಂಬಂಧಿಕರು ಹಾಗೂ ಬಡಾವಣೆಯ ಜನ ತಡ ರಾತ್ರಿ ತಾಯಿಯ ಅಂತ್ಯಕ್ರಿಯೆ ಮಾಡಿದ್ದಾರೆ.
Laxmi News 24×7