Breaking News

ವಿಷ ಸೇವಿಸಿ ವೃದ್ಧ ದಂಪತಿ ಆತ್ಮಹತ್ಯೆ

Spread the love

ಬೆಂಗಳೂರು: ವಿಷ ಸೇವಿಸಿ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಬಸವೇಶ್ವರ ನಗರದಲ್ಲಿ ನಡೆದಿದೆ.

ಈಶ್ವರ್ ಆಚಾರ್ಯ ಹಾಗೂ ಗೌರಿ ಮೃತ ವೃದ್ಧ ದಂಪತಿ. ಇಬ್ಬರೂ ಶುಗರ್ ಹಾಗೂ ಬಿಪಿಯಿಂದ ಬಳಲುತ್ತಿದ್ದರು. ದಿನದಿಂದ ದಿನಕ್ಕೆ ಅನಾರೋಗ್ಯ ಉಲ್ಬಣಗೊಳ್ಳುತ್ತಿತ್ತು. ಇದೇ ಕಾರಣಕ್ಕೆ ಬೇಸತ್ತು ಜ್ಯೂಸ್‌ ಬಾಟಲ್‌ನಲ್ಲಿ ವಿಷ ಬೆರೆಸಿಕೊಂಡು ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಬಸವೇಶ್ವರ ನಗರ ಠಾಣೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಪರಿಶಿಲನೆ ನಡೆಸಿದ್ದಾರೆ.

ದಂಪತಿಗೆ ಇಬ್ಬರು ಹೆಣ್ಣುಮಕ್ಕಳಿದ್ದು, ಅವರ ಮದುವೆ ಆದ ಬಳಿಕವೂ ತಂದೆ ತಾಯಿ ಯೋಗಕ್ಷೇಮ ನೋಡಿಕೊಳ್ಳುತ್ತಿದ್ದರಂತೆ. ಅದೇನು ಅನ್ನಿಸಿತ್ತೋ ವೃದ್ದ ದಂಪತಿ ಇವತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ.

ದಂಪತಿ ಇಬ್ಬರೇ ಪ್ರತ್ಯೇಕವಾಗಿ ವಾಸವಾಗಿದ್ದರು. ಬೇರೆಯವರ ಸಹಾಯ ಪಡೆದುಕೊಳ್ಳುತ್ತಿರಲಿಲ್ಲ. ಸ್ವಾಭಿಮಾನದ ಜೀವನ ನಡೆಸುತ್ತಿದ್ದರು. ದಂಪತಿಯ ಸಾವಿಗೆ ಏರಿಯಾದ ಜನ ಕಂಬನಿ ಮಿಡಿದಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ