Breaking News

ದೇಶದಲ್ಲಿ ಮುಂಗಾರು ಮಳೆ ಜೋರು – ಅಲ್ಲಲ್ಲಿ ಅವಾಂತರ ಸೃಷ್ಟಿ, ಜನಜೀವನ ಅಸ್ತವ್ಯಸ್ತ

Spread the love

ನವದೆಹಲಿ: ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಜೋರಾಗಿದ್ದು, ಅಲ್ಲಲ್ಲಿ ಅವಾಂತರ ಸೃಷ್ಟಿಯಾಗಿವೆ.

ಮಹಾರಾಷ್ಟ್ರದ ನಾಸಿಕ್, ಪಾಲ್‌ಗಡಗಳಲ್ಲಿ ಭಾರಿ ಮಳೆಯಾಗ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಗುಜರಾತ್‌ನ ವಲ್ಸಾದ್ ಜಿಲ್ಲೆಯ ಉಮರ್ ಗಾಂವ್ ತಾಲೂಕಿನಲ್ಲಿ ಕಳೆದ 24 ಗಂಟೆಗಳಲ್ಲಿ 43 ಇಂಚು ಮಳೆಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಅಸ್ಸಾಂನಲ್ಲಿ ಭೀಕರ ಪ್ರವಾಹದಿಂದ 11 ಜಿಲ್ಲೆಗಳು ಹಾನಿಗೊಳಗಾಗಿದೆ. 6.53 ಲಕ್ಷ ಜನರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 10 ಜನರು ಸಾವನ್ನಪ್ಪಿದ್ದು, ಆ ಮೂಲಕ ಸಾವಿನ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದಿಂದ ರಾಜ್ಯಕ್ಕೆ ಒಟ್ಟು 70 ಸಾವಿರ ಕ್ಯೂಸೆಕ್ ನೀರಿನ ಒಳಹರಿವು ದಾಖಲಾಗಿದ್ದು, ಕೃಷ್ಣಾ, ದೂದಗಂಗಾ, ವೇದಗಂಗಾ, ಹಿರಣ್ಯಕೇಶಿ ನದಿಗಳು ಮೈದುಂಬಿ ಹರಿಯುತ್ತಿವೆ. ಚಿಕ್ಕೋಡಿ ಉಪವಿಭಾಗದ 6 ಕೆಳ ಹಂತದ ಸೇತುವೆಗಳು ಜಲಾವೃತವಾಗಿದೆ. ನಿಪ್ಪಾಣಿ ತಾಲೂಕಿನ 5 ಚಿಕ್ಕೋಡಿ ತಾಲೂಕಿನ 1 ಸೇತುವೆ ಮುಳುಗಡೆಯಾಗಿವೆ. ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಹಾಗೂ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಅಬ್ಬರದ ಮಳೆಗೆ ಯಲ್ಲಾಪುರ ತಾಲೂಕಿನ ಕಳಚೆ ರಸ್ತೆ ಮಾರ್ಗದಲ್ಲಿ ಗುಡ್ಡ ಕುಸಿತವಾಗಿ ಬೃಹತ್ ಬಂಡೆಗಳು ರಸ್ತೆಗೆ ಬಂದು ಬಿದ್ದಿದೆ. ಹಾವೇರಿ ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗಿದ್ದು. ಈ ಮಧ್ಯೆ, ಇನ್ನು, ಮಳೆ ಮೋಡಗಳು ಉತ್ತರ ಭಾರತದಿಂದ ಆರಂಭವಾಗಿ ಹಿಮಾಲಯ, ಚೀನಾ ಮೂಲಕ ದಕ್ಷಿಣ ಕೊರಿಯಾ ತನಕ ಸುಮಾರು 7,000 ರಿಂದ 10,000 ಕಿ.ಮೀ. ಉದ್ದದ ಪಟ್ಟಿಯನ್ನು ಉಪಗ್ರಹಗಳು ಸೆರೆಹಿಡಿದಿವೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ