Breaking News

ಕ್ಯಾಂಟರ್, ಬೈಕ್ ಮಧ್ಯೆ ಭೀಕರ ಅಪಘಾತ – ದೇವಾಲಯಕ್ಕೆ ತೆರಳುತ್ತಿದ್ದ ಇಬ್ಬರು ಸ್ನೇಹಿತರು ದುರ್ಮರಣ

Spread the love

ಕೋಲಾರ: ಕ್ಯಾಂಟರ್  ವಾಹನ ಹಾಗೂ ರಾಯಲ್ ಎನ್‌ಫೀಲ್ಡ್  ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ದೇವಾಲಯಕ್ಕೆ ತೆರಳುತ್ತಿದ್ದ ಇಬ್ಬರು ಸ್ನೇಹಿತರು  ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅರಿಕೆರೆ ಗೇಟ್ ಸಮೀಪ ನಡೆದಿದೆ.

ಚಿಂತಾಮಣಿ ತಿಮ್ಮಸಂದ್ರದ ಶಶಿ (25), ಬೆಂಗಳೂರು ನೆಲಮಂಗಲದ ತನುಷ್ (25) ಮೃತ ಸ್ನೇಹಿತರು. ಬೆಳ್ಳಂ ಬೆಳಗ್ಗೆ ಕಾಣಿಪಾಕಂ ದೇವಾಲಯಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಎನ್‌ಫೀಲ್ಡ್‌ನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ