ನವದೆಹಲಿ: ನಾಳೆ ಮಧ್ಯಾಹ್ನ ಮತ್ತೆ ಕಾಕ್ರೋಚ್ ಜನತಾ ಪಾರ್ಟಿ ನಿಯೋಗವನ್ನು ಭೇಟಿ ಮಾಡಿ ಸರ್ಕಾರದ ನಿರ್ಧಾರವನ್ನು ತಿಳಿಸುತ್ತೇವೆ ಎಂದು ಕೇಂದ್ರ ಸಚಿವ ಜೆಪಿ ನಡ್ಡಾ ತಿಳಿಸಿದ್ದಾರೆ
ಸಚಿವ ಜೀತೇಂದ್ರ ಸಿಂಗ್ ಅವರೊಂದಿಗೆ ದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್ನಲ್ಲಿ ಸಿಜೆಪಿಯ ಮುಖ್ಯ ವಕ್ತಾರ ಸೌರವ್ ದಾಸ್ ಮತ್ತು ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಅವರೊಂದಿಗೆ ಎರಡನೇ ಸುತ್ತಿನ ಸಭೆ ನಡೆಸಿದ ಬಳಿಕ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.
ಸುಮಾರು 2 ಗಂಟೆಗಳ ಕಾಲ ಸಭೆ ನಡೆಯಿತು. 3 ಪ್ರಮುಖ ಬೇಡಿಕೆಗಳು ಮತ್ತು ಪರೀಕ್ಷೆಗೆ ಸಂಬಂಧಿಸಿದಂತೆ 5 ಸುಧಾರಣಾ ಸಲಹೆಗಳನ್ನು ನೀಡಿದ್ದಾರೆ. ನಾಳೆ ಮಧ್ಯಾಹ್ನ ಅವರನ್ನು ಮತ್ತೆ ಭೇಟಿ ಮಾಡಿ ಸರ್ಕಾರದ ನಿರ್ಧಾರವನ್ನು ತಿಳಿಸುತ್ತೇವೆ ಎಂದು ಹೇಳಿರುವುದಾಗಿ ತಿಳಿಸಿದರು.
ನಾವು ಅವರ ಕಳವಳಗಳನ್ನು ಆಲಿಸಿದೆವು ಮತ್ತು ಸಮಸ್ಯೆಗಳನ್ನು ವಿವಿಧ ದೃಷ್ಟಿಕೋನಗಳಿಂದ ಚರ್ಚಿಸಲಾಯಿತು. ನಾವು ಅವರ ಬೇಡಿಕೆಗಳನ್ನು ಆಲಿಸಿದ್ದೇವೆ ಮತ್ತು ನಾವು ಅವರಿಗೆ ಉತ್ತರಿಸುತ್ತೇವೆ ಎಂದು ಹೇಳಿದರು.
Laxmi News 24×7