ಬೆಂಗಳೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ದೂಪನಹಳ್ಳಿ ಬಳಿ ನಡೆದಿದೆ.
ಪ್ರೇರಣ ಮೃತ ಗೃಹಿಣಿ. ಕಳೆದ ಒಂದು ವರ್ಷದ ಹಿಂದಷ್ಟೇ ವಿನಯ್ ಕುಮಾರ್ ಎಂಬುವವರನ್ನು ಮದುವೆಯಾಗಿದ್ದರು. ಪತಿ ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದು, ಪ್ರೇರಣ ಸದ್ಯ ಬಿಎಸ್ಸಿ ಪದವಿ ಓದುತ್ತಿದ್ದರು ಎಂದು ತಿಳಿದುಬಂದಿದೆ.
ದೂಪನಹಳ್ಳಿ ಬಳಿಯಲ್ಲಿ ಗಂಡನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತಿ ಹಾಗೂ ಮಾವನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Laxmi News 24×7