Breaking News

ರಾಜ್ಯದಲ್ಲಿ ಭಾರೀ ಅಕ್ರಮ – ಸರ್ಕಾರಕ್ಕೆ 768 ಕೋಟಿ ನಷ್ಟ, ತನಿಖಾ ವರದಿ ಬಹಿರಂಗ

Spread the love

ಕೋಲಾರ: ಸರ್ಕಾರಿ ನೌಕರರ ಸಂಘದ ಮಾಜಿ ಜಿಲ್ಲಾಧ್ಯಕ್ಷರ ಮನೆ ಮೇಲೆ ಲೋಕಾಯುಕ್ತ  ದಾಳಿ ಮಾಡಿದ್ದ ಪ್ರಕರಣದ ತನಿಖಾ ವರದಿಯನ್ನು ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. 768 ಕೋಟಿ ರೂ. ಸರ್ಕಾರಕ್ಕೆ ನಷ್ಟವಾಗಿದ್ದು, ಅಕ್ರಮದ ತನಿಖಾ ವರದಿಯನ್ನು ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ.

ಸರ್ವೇ ಸೂಪರ್ ವೈಸರ್ ಹಾಗೂ ಕೋಲಾರ (Kolar) ಮಾಜಿ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ್ ಬಾಬು ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ 435 ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು. ತಹಶೀಲ್ದಾರ್, ಎಡಿಎಲ್‌ಆರ್, ಡಿಡಿಎಲ್‌ಆರ್ ನಕಲಿ ಸೀಲುಗಳು ಪತ್ತೆಯಾಗಿದ್ದವು. 128 ಮೂಲ ಸರ್ಕಾರಿ ದಾಖಲೆಗಳು ಸಿಕ್ಕಿದ್ದವು. ಮಂಜೂರಾತಿ ರಿಜಿಸ್ಟರ್, ಪಟ್ಟಾ ಪುಸ್ತಕ, ಖರ್ದಾ ರಿಜಿಸ್ಟರ್, ಪೋಡಿ ದಾಖಲೆಗಳು ಸಹ ಇಲ್ಲಿ ಪತ್ತೆಯಾಗಿದ್ದವು.

ಸರ್ಕಾರಿ ಕಚೇರಿಯಲ್ಲಿ ಇರಬೇಕಾದ ದಾಖಲೆಗಳು ಸುರೇಶ್ ಬಾಬು ಫಾರ್ಮ್ ಹೌಸ್‌ನಲ್ಲಿ ಪತ್ತೆಯಾಗಿದ್ದವು. ಇವುಗಳನ್ನು ಪರಿಶೀಲನೆ ನಡೆಸಿದಾಗ ಕೋಲಾರ ಹಾಗೂ ಮಾಲೂರು ತಾಲೂಕಿನ ಸುಮಾರು 485 ಎಕರೆ ಅಕ್ರಮ ಭೂ ಮಂಜೂರಾತಿ ಮಾಡಿರುವುದು ಬೆಳಕಿಗೆ ಬಂದಿತ್ತು. ಇದರಿಂದ ಸರ್ಕಾರಕ್ಕೆ 768 ಕೋಟಿ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ತಪ್ಪಿತಸ್ಥರ ಮೇಲೆ ಕ್ರಮದ ಬಗ್ಗೆ ಚರ್ಚಿಸಲು ಕಂದಾಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಕೋಲಾರ ಜಿಲ್ಲಾಧಿಕಾರಿಗಳಿಗೆ ಆಗಸ್ಟ್ 21 ರಂದು ಬರುವಂತೆ ಲೋಕಾಯುಕ್ತ ಅಧಿಕಾರಿಗಳು ಬುಲಾವ್‌ ನೀಡಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ