ಬೆಳಗಾವಿ: ನೀಟ್ ಪರೀಕ್ಷೆ ಅಕ್ರಮ ವಿರುದ್ಧ ದೆಹಲಿಯಲ್ಲಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಮಾಡಿರುವುದನ್ನು ಖಂಡಿಸಿ ಹಾಗೂ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಆಗ್ರಹಿಸಿ ನಗರದಲ್ಲಿ ಗುರುವಾರ ವಿವಿಧ ಕಾಲೇಜ್‌ಗಳ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿಭಟಿಸಿದರು.
ಚನ್ನಮ್ಮ ವೃತ್ತದಲ್ಲಿ ಜಮಾಯಿಸಿ ಕೆಲಹೊತ್ತು ರಸ್ತೆ ತಡೆ ಮಾಡಿ, ಆಕ್ರೋಶ ಹೊರಹಾಕಿದ ವಿದ್ಯಾರ್ಥಿಗಳು ಕೇಂದ್ರ ಸರ್ಕಾರ, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಸಚಿವ ಧರ್ಮೇಂದ್ರ ಪ್ರಧಾನ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ಮಹಾತ್ಮ ಗಾಂಧೀಜಿ, ಡಾ.ಬಿ.ಆರ್.ಅಂಬೇಡ್ಕರ್, ಭಗತ್ ಸಿಂಗ್‌ರ ಭಾವಚಿತ್ರ ಹಾಗೂ ತ್ರಿವರ್ಣ ಧ್ವಜ ಹಿಡಿದು ೋಷಣೆ ಕೂಗಿದರು. ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆತ್ಮಹತ್ಯೆ ಮಾಡಿಕೊಂಡ 20 ವಿದ್ಯಾರ್ಥಿಗಳ ಸಾವಿಗೆ ನ್ಯಾಯ ಸಿಗಬೇಕು. ಲಾಠಿಚಾರ್ಜ್ ಮಾಡಿದ್ದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಜನರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.
ವೈಯಕ್ತಿಕ ನಿಂದನೆ: ನೀಟ್‌ಗೆ ಸಂಬಂಧಿಸಿ ಪ್ರತಿಭಟನೆ ನಡೆದಿದ್ದರೂ ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನೇ ಗುರಿಯಾಗಿಸಿ ಘೋಷಣೆ ಕೂಗಲಾಯಿತು. ಪ್ರತಿಭಟನೆ ಬಳಿಕ ಅರ್ಧ ಗಂಟೆಗೂ ಹೆಚ್ಚು ಕಾಲ ಸಾಹಿತ್ಯ ಭವನ ಆವರಣದಲ್ಲೇ ಸೇರಿದ್ದ ಸಮೂಹ, ನರೇಂದ್ರ ಮೋದಿ ಟೀಕಿಸುವ ಎಡಿಟೆಡ್ ಫೋಟೋ ಹಾಗೂ ವೈಯಕ್ತಿಕ ಜೀವನದ ಕುರಿತಾದ ನಿಂದನೆಗಳಿದ್ದ ಫಲಕಗಳನ್ನು ಪ್ರದರ್ಶಿಸಿದರು.
ಸಿಬಾ ಮುಲ್ಲಾ, ನಿಸಾರ್‌ಖಾನ್ ಪಠಾಣ, ವೇದಾಂತ ಜಾಧವ, ರುಮಾಯಿಸಾ ದಾವಣಗೆರೆ, ಸ್ಪಂದನಾ ಹಲಸಂಗಿಮಠ, ಅಥರ್ವ ಪುಣೇದ ಇತರರಿದ್ದರು.
Laxmi News 24×7