Breaking News

3 ಲಕ್ಷದವರೆಗೆ ಆದಾಯ ಮಿತಿ ಹೆಚ್ಚಳ – ಸಿಎಂ ಜೊತೆ ಚರ್ಚಿಸಿ ತೀರ್ಮಾನ ಎಂದ ಸಚಿವ ಮುನಿಯಪ್ಪ

Spread the love

ಬೆಂಗಳೂರು: ಬಿಪಿಎಲ್  ಕಾರ್ಡ್‌ಗೆ ನಿಗದಿಪಡಿಸಿರುವ ವಾರ್ಷಿಕ ಆದಾಯ ಮಿತಿಯನ್ನು 3 ಲಕ್ಷ ರೂ.ವರೆಗೆ ಹೆಚ್ಚಿಸುವ ಬಗ್ಗೆ ಸರ್ಕಾರದಲ್ಲಿ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿ  ಜೊತೆ ಚರ್ಚೆ ನಡೆಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ) ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಬಿಪಿಎಲ್ ಕಾರ್ಡ್‌ಗೆ ಸಂಬಂಧಿಸಿದ ಆದಾಯ ಮಿತಿಯನ್ನು ಪರಿಷ್ಕರಿಸಲಾಗುತ್ತಿದೆ. ಈಗಾಗಲೇ ಸುಮಾರು 50% ಪರಿಷ್ಕರಣೆ ಪ್ರಕ್ರಿಯೆ ನಡೆದಿದೆ. ಇದರ ಜೊತೆಗೆ, ವಿವಿಧ ಕಾರಣಗಳಿಂದ ಸ್ಥಗಿತಗೊಂಡಿರುವ ಕೆಲವು ಬಿಪಿಎಲ್ ಕಾರ್ಡ್‌ಗಳನ್ನು ಎಪಿಎಲ್ ಕಾರ್ಡ್‌ಗಳಾಗಿ ಪರಿವರ್ತಿಸುವ ಪ್ರಕ್ರಿಯೆಯೂ ನಡೆಯುತ್ತಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಬರದ ಪರಿಸ್ಥಿತಿ ಇದ್ದರೂ ಆಹಾರ ವಿತರಣೆಗೆ ಯಾವುದೇ ತೊಂದರೆಯಾಗುವುದಿಲ್ಲ. ರಾಗಿ ಮತ್ತು ಅಕ್ಕಿ ಒಂದು ವರ್ಷಕ್ಕೆ ಸಾಕಾಗುವಷ್ಟು ಸಂಗ್ರಹವಿದೆ. ಕೇಂದ್ರ ಸರ್ಕಾರದ ಬಳಿಯೂ ಅಗತ್ಯ ಪ್ರಮಾಣದ ಅಕ್ಕಿ ಲಭ್ಯವಿದೆ ಎಂದು ಭರವಸೆ ನೀಡಿದರು.

ಮಳೆ ಕೊರತೆ ಬಗ್ಗೆ ಆತಂಕ ಬೇಡ. ಇನ್ನೂ ಮಳೆ ಬರುವ ನಿರೀಕ್ಷೆ ಇದೆ ಎಂದು ಹೇಳಿದ ಅವರು, ಸಚಿವ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.

ಇದಕ್ಕೂ ಮುನ್ನ ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದ ಯಜಮಾನಿ ಮೃತಪಟ್ಟರೆ, ಅವರ ಸ್ಥಾನಕ್ಕೆ ಸೊಸೆ ಅಥವಾ ಮಗಳ ಹೆಸರನ್ನು ಸೇರಿಸುವ ಪ್ರಕ್ರಿಯೆಯನ್ನೂ ಸರಳಗೊಳಿಸಲಾಗಿದೆ. ಈ ಹಿಂದೆ ಮೂರು ತಿಂಗಳು ತೆಗೆದುಕೊಳ್ಳುತ್ತಿದ್ದ ಅನುಮೋದನೆ, ಈಗ ಒಂದು ತಿಂಗಳೊಳಗೆ ಪೂರ್ಣಗೊಳ್ಳಲಿದೆ ಎಂದು ಹೇಳಿದರು.

ಇನ್ನೊಂದೆಡೆ, ನ್ಯಾಯಬೆಲೆ ಅಂಗಡಿಗಳು ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ತೆರೆದಿರಬೇಕು ಎಂದು ಸೂಚನೆ ನೀಡಲಾಗಿದೆ. ಯಾವುದೇ ಅಂಗಡಿ ಈ ನಿಯಮ ಪಾಲಿಸದಿದ್ದರೆ ಸಾರ್ವಜನಿಕರು ಆಹಾರ ಇಲಾಖೆಯ ‘ಅನ್ನ ಸಹಾಯವಾಣಿ’ 1967 ಸಂಖ್ಯೆಗೆ ಕರೆ ಮಾಡಿ ದೂರು ನೀಡಬಹುದು ಎಂದು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ