Breaking News

ಧುಮ್ಮಿಕ್ಕುತ್ತಿರುವ ʻಜೋಗದ ಸಿರಿʼಯನ್ನು ಕಣ್ತುಂಬಿಕೊಂಡ ಸಾವಿರಾರು ಪ್ರವಾಸಿಗರು

Spread the love

ಶಿವಮೊಗ್ಗ: ಶರಾವತಿ ಕಣಿವೆ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ಈ ಹಿನ್ನೆಲೆ ಶರಾವತಿ ನದಿಗೆ ಭಾರೀ ಪ್ರಮಾಣದ ನೀರು ಹರಿದು ಬರುತ್ತಿದ್ದು, ಸಾಗರ ತಾಲೂಕಿನಲ್ಲಿರುವ ಜೋಗ ಜಲಪಾತಕ್ಕೆ ಜೀವಕಳೆ ಬಂದಿದೆ.

ಧುಮ್ಮಿಕ್ಕಿ ಹರಿಯುತ್ತಿರುವ ಜೋಗ ಜಲಪಾತವನ್ನು ನೋಡಲು ಪ್ರವಾಸಿಗರ ದಂಡೇ ಬರುತ್ತಿದೆ. ಇಂದು ಭಾನುವಾರವಾಗಿರುವುದರಿಂದ ಜೋಗಕ್ಕೆ ಸಾವಿರಾರು ಪ್ರವಾಸಿಗರು ಆಗಮಿಸಿದ್ದಾರೆ. ಶನಿವಾರ ಸಹ ಸಾವಿರಾರು ಮಂದಿ ಪ್ರವಾಸಿಗರು ಭೇಟಿ ನೀಡಿದ್ದರು.

ಮಳೆ ಹಾಗೂ ಮಂಜಿನಾಟದ ನಡುವೆ ಜೋಗದ ಸಿರಿಯನ್ನು ಪ್ರವಾಸಿಗರು ಕಣ್ತುಂಬಿಕೊಳ್ಳುತ್ತಿದ್ದಾರೆ. ರಾಜ, ರಾಣಿ, ರೋರರ್, ರಾಕೆಟ್‌ ಫಾಲ್ಸ್‌ನಲ್ಲಿ ಹಾಲ್ನೊರೆಯಂತೆ ನೀರು ಉಕ್ಕಿ ಹರಿಯುತ್ತಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ