Breaking News

ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ AK-47 ಹಿಡಿದು ಗುಂಡು ಹಾರಿಸಿದ ಕಾನ್ಸ್‌ಟೇಬಲ್‌ – ವಿಡಿಯೋ ವೈರಲ್‌ ಬೆನ್ನಲ್ಲೇ ಅಮಾನತು

Spread the love

ಪಾಟ್ನಾ: ಬಿಹಾರದಲ್ಲಿ  ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ AK-47 ಹಿಡಿದು ಗುಂಡು ಹಾರಿಸಿದ ಕಾನ್ಸ್‌ಟೇಬಲ್‌ನನ್ನು ಅಮಾನತು ಮಾಡಲಾಗಿದೆ.

ಜುಲೈ 25 ರಂದು ಸಿವಾನ್ ಜಿಲ್ಲೆಯಲ್ಲಿ ನಡೆದ ‘ಬಿಹಾರ ಬಂದ್’ ಪ್ರತಿಭಟನೆಯ ಸಂದರ್ಭದಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಕಡೆ AK-47 ರೈಫಲ್ ಹಿಡಿದು ಕಾನ್ಸ್‌ಟೇಬಲ್‌ ಗುಂಡು ಹಾರಿಸಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ವಿಚಾರವಾಗಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ವರದಿಗಳ ಪ್ರಕಾರ, ಪ್ರತಿಭಟನೆ ವೇಳೆ ಮೂವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅವರನ್ನು ಪಾಟ್ನಾದ ಜಯಪ್ರಭಾ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಗಾಯಗೊಂಡವರ ಸ್ಥಿತಿ ಸ್ಥಿರವಾಗಿದೆ.

ಗಾಯಾಳುಗಳಲ್ಲಿ 15 ವರ್ಷದ ಎಂಡಿ ಆರಿಫ್ ಎಂಬ ಬಾಲಕ ಸಹ ಸೇರಿದ್ದಾನೆ. ಸ್ಥಳೀಯ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಈತ, ಪ್ರತಿಭಟನೆ ಸಮಯದಲ್ಲಿ ಅಂಗಡಿ ಮುಚ್ಚಿ ಮನೆಗೆ ಹಿಂತಿರುಗುತ್ತಿದ್ದಾಗ ಈತನ ಕುತ್ತಿಗೆಗೆ ಗುಂಡು ತಗುಲಿದೆ. ಶಸ್ತ್ರಚಿಕಿತ್ಸೆಯ ಸಮಯದಲ್ಲಿ ವೈದ್ಯರು ಗುಂಡನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ. ಆತನ ಸ್ಥಿತಿ ಈಗ ಸ್ಥಿರವಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಬಿಹಾರದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್, ಕಾನ್ಸ್‌ಟೇಬಲ್‌ ಗುಂಡು ಹಾರಿಸುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೂಡ ಈ ವಿಷಯವನ್ನು ಪ್ರಸ್ತಾಪಿಸಿ, ಆಕ್ರೋಶ ಹೊರಹಾಕಿದ್ದಾರೆ.

ಪ್ರತಿಭಟನೆ ವೇಳೆ ಪೊಲೀಸರು ರಿವಾಲ್ವಾರ್‌ ಕೈಯಲ್ಲಿ ಹಿಡಿದು ಸಾಗಿರುವ ವಿಡಿಯೋಗಳು ಸಹ ಕ್ಯಾಮೆರಾದಲ್ಲಿ ಸೆರೆಯಾಗಿವೆ.


Spread the love

About Laxminews 24x7

Check Also

ಗದ್ದಲ ಕೋಲಾಹಲದ ನಡುವೆ ಲೋಕಸಭೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಮಸೂದೆ ಮಂಡನೆ

Spread the loveನವದೆಹಲಿ: ವಿಪಕ್ಷಗಳ ಗದ್ದಲ ಕೋಲಾಹಲದ ನಡುವೆಯೇ ಲೋಕಸಭೆಯಲ್ಲಿ  ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಮಸೂದೆ ಮಂಡನೆಯಾಗಿದೆ. ಕೇಂದ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ