Breaking News

KPSC ನಲ್ಲಿ 400 ಹುದ್ದೆಗಳಿಗೆ 800 ಕೋಟಿ ಡೀಲ್‌ ಆಗಿದೆ: ಆರ್‌. ಅಶೋಕ್‌ ಬಾಂಬ್‌

Spread the love

ಬೆಂಗಳೂರು: ಕೆಪಿಎಸ್‌ಸಿ ನಲ್ಲಿ ಪಶುವೈದ್ಯಾಧಿಕಾರಿ ಹುದ್ದೆಗಳ ಮಾರಾಟ ಆಗಿದೆ. 400 ಹುದ್ದೆಗಳಿಗೆ 2 ಕೋಟಿ ರೂ. ನಂತೆ 800 ಕೋಟಿ ರೂ. ಲಂಚ ಪಡೆಯಲಾಗಿದೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌  ಗಂಭೀರ ಆರೋಪ ಮಾಡಿದ್ದಾರೆ.

ವಿಧಾನಸೌಧದಲ್ಲಿ ಇಂದು (ಸೋಮವಾರ) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೆಪಿಎಸ್‌ಸಿ ನಲ್ಲಿ 800 ಕೋಟಿ ಡೀಲ್ ಆಗಿದೆ. ಈ ಪ್ರಕರಣದ ಬಗ್ಗೆ ಸಿಬಿಐ ತನಿಖೆ ಆಗಬೇಕು. ರ‍್ಯಾಂಕ್‌ ಬಂದಿರೋರಿಗೆ ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಕಡಿಮೆ ಅಂದ್ರೆ 350 ಮಾರ್ಕ್ಸ್‌ ಬಂದಿದೆ. ಆದ್ರೆ ಕಾಲೇಜುಗಳಲ್ಲಿ ಸಾಧಾರಣ ವಿದ್ಯಾರ್ಥಿ ಆಗಿದ್ದು, ಇಲ್ಲಿ ಕಾಸು ಕೊಟ್ಟವರಿಗೆ 400 ಅಂಕ ಬಂದಿದೆ. ಹಾಗಾಗಿ ಕೆಪಿಎಸ್‌ಸಿ ಆಂತರಿಕ ತನಿಖೆ ಬೇಡ, ಸಿಬಿಐ ತನಿಖೆ ಮಾಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಕೆಪಿಎಸ್‌ಸಿ ಅಕ್ರಮಕ್ಕೆ ಅವಕಾಶ ಕೊಡಲ್ಲ ಅಂದಿದ್ರು. ಈಗ ಪಶುವೈದ್ಯಾಧಿಕಾರಿ ಹುದ್ದೆಗಳಲ್ಲಿ ಅಕ್ರಮ ಆಗಿದೆ. ಒಂದೊಂದು ಪೋಸ್ಟ್ ಗೆ 1 ರಿಂದ 2 ಕೋಟಿ ರೂ. ವಸೂಲಿ ಮಾಡಿದ್ದಾರೆ. ಈ ಬಗ್ಗೆ ಆಡಿಯೋ ಕೂಡ ವೈರಲ್‌ ಆಗಿದೆ. ಅದರಲ್ಲಿ ಐಎಎಸ್‌ ಅಧಿಕಾರಿ ಅಂತಲೂ ಪ್ರಸ್ತಾಪಿಸಲಾಗಿದೆ. ಆ ಐಎಎಸ್ ಅಧಿಕಾರಿ ಯಾರು? ಸರ್ಕಾರದ ಮಂತ್ರಿಗಳಿಗೆ ಎಷ್ಟು ಹಣ ಹೋಗುತ್ತದೆ? ಇದರ ಸಂಪೂರ್ಣ ತನಿಖೆ ಆಗಬೇಕು. ಇದುವರೆಗೆ ಪೊಲೀಸರು ಏನೂ ಕ್ರಮ ತಗೊಂಡಿಲ್ಲ, ಯಾರನ್ನೂ ಬಂಧಿಸಿಲ್ಲ. ಇದರ ಹಿಂದೆ ದೊಡ್ಡ ಜಾಲ ಇದೆ ಎಂದು ದೂರಿದ್ದಾರೆ.

ಲಂಚ ಪಡೆದವರಿಂದಲೇ ತನಿಖೆನಾ?
ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಎಸ್‌ಸಿ ಆಂತರಿಕ ತನಿಖೆ ಮಾಡ್ತಿದೆಯಂತೆ. ಲಂಚ ಪಡೆದವರೇ ತನಿಖೆ ಮಾಡಿದರೆ ಸತ್ಯ ಹೇಗೆ ಬರುತ್ತೆ? ದಾಖಲೆ ಇದ್ರೂ ಸರ್ಕಾರ ಯಾಕೆ ತನಿಖೆ ಮಾಡ್ತಿಲ್ಲ? ರಾಹುಲ್ ಗಾಂಧಿ ಯಾಕೆ ಇದರ ಬಗ್ಗೆ ಚಕಾರ ಎತ್ತಿಲ್ಲ? ಕೆಪಿಎಸ್‌ಸಿ ಅಧ್ಯಕ್ಷರ ವಜಾ ಆಗಿದೆ, 80 ಲಕ್ಷ ರೂ.ಗೆ ದಾಖಲೆ ಇದೆ. ಯಾಕೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಬಾಯಿ ಬಿಡ್ತಿಲ್ಲ? ರಾಜ್ಯದಲ್ಲಿ ಯಾವುದೇ ಪರೀಕ್ಷಾ ಅಕ್ರಮ ಆದರೆ ಡಿಸಿ ಹೊಣೆ ಅಂತೆ, ಇದನ್ನ ಹೇಳಿರೋದು ಡಿಕೆ ಶಿವಕುಮಾರ್. ಕೇಂದ್ರದಲ್ಲಿ ಮಂತ್ರಿ ಹೊಣೆ ಅಂತೆ, ರಾಜ್ಯದಲ್ಲಿ ಡಿಸಿ ಹೊಣೆನಾ? ಇದು ನಿಮ್ಮ ದ್ವಂದ್ವ ನಿಲುವು ಅಲ್ವಾ ಅಂತ ಪ್ರಶ್ನೆ ಮಾಡಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ