Breaking News

ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಡಿಕೆಶಿ

Spread the love

ಬೆಂಗಳೂರು: ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಸಿಎಂ ಡಿ.ಕೆ ಶಿವಕುಮಾರ್  ತಿಳಿಸಿದರು.

ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ನೀವು ಆತುರದಲ್ಲಿದ್ದೀರಿ. ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಇದೇ ವೇಳೆ ಇಂದು ನಮ್ಮ ಸಂಸತ್ ಸದಸ್ಯರನ್ನು ಭೇಟಿ ಮಾಡುತ್ತಿದ್ದು, ಅವರಿಗೆ ರಾಜ್ಯದ ಬರ ಪರಿಸ್ಥಿತಿ, ನೀರಿನ ಪರಿಸ್ಥಿತಿ, ಕಾವೇರಿ, ಮಹದಾಯಿ, ಮೇಕೆದಾಟು, ಕೃಷ್ಣ ಸೇರಿದಂತೆ ಅನೇಕ ನೀರಾವರಿ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕಾಗಿದೆ ಎಂದರು.

ನಾನು ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಯಾವ ವಿಚಾರದಲ್ಲಿ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು ಎಂದು ಸಂಸದರಿಗೆ ಮನವಿ ಮಾಡಲು ಹೋಗುತ್ತಿದ್ದೇನೆ. ನಂತರ ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆ ಕರೆಯಲಾಗುವುದು. ರಾಜ್ಯದ ಹಿರಿಯ ನಾಯಕರ ಜೊತೆಗೂ ಪ್ರಮುಖ ವಿಚಾರಗಳನ್ನು ಚರ್ಚಿಸಲಾಗುವುದು ಎಂದು ಹೇಳಿದರು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ