Breaking News

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the love

ಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ ತಿಂಗಳು 5 ಲಕ್ಷ ಗ್ರಾಮೀಣರಿಗೆ ಉದ್ಯೋಗ ನೀಡಿ, 1.5 ಕೋಟಿ ಮಾನವದಿನ ಉದ್ಯೋಗ ಸೃಷ್ಟಿ ಮಾಡುವಷ್ಟು ಅನುದಾನವಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್‌ ಖಂಡ್ರೆ  ಹೇಳಿದ್ದಾರೆ.

ವಿಕಾಸಸೌಧದಲ್ಲಿ ಮಾತನಾಡಿದ ಅವರು, 60:40ರ ಅನುಪಾತದಲ್ಲಿ ಕೇಂದ್ರ ಸರ್ಕಾರ  ಮೊದಲ ತ್ರೈಮಾಸಿಕಕ್ಕೆ 1,700 ಕೋಟಿ ರೂ. ರಾಜ್ಯ ಸರ್ಕಾರ 1,200 ಕೋಟಿ ರೂ. ಹಣವನ್ನು ನೀಡಿದೆ. ಈ ಮೂಲಕ ಪ್ರತಿ ತಿಂಗಳು 5 ಲಕ್ಷ ಗ್ರಾಮೀಣರಿಗೆ ಉದ್ಯೋಗ ನೀಡಿ, 1.5 ಕೋಟಿ ಮಾನವದಿನ ಉದ್ಯೋಗ ಸೃಷ್ಟಿ ಮಾಡುವಷ್ಟು ಅನುದಾನವಿದೆ ಎಂದಿದ್ದಾರೆ.

ಮನ್ರೇಗಾದ ಬದಲಾದ ರೂಪ ವಿಬಿಜಿ ರಾಮ್ ಜಿಗೆ ಹಣದ ಕೊರತೆ ಇಲ್ಲ. ಪ್ರಥಮ ತ್ರೈಮಾಸಿಕಕ್ಕೆ 2900 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಕೃಷಿ ಹೊಂಡ ನಿರ್ಮಾಣ, ಹನಿ ನೀರಾವರಿ, ಕೆರೆ ಕಾಲುವೆ ಅಭಿವೃದ್ಧಿ, ಚೆಕ್ ಡ್ಯಾಂ ಇತ್ಯಾದಿ ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಕೈಗೊಳ್ಳಲು ಅವಕಾಶವಿದ್ದು, ಉದ್ಯೋಗ ಕೇಳಿ ಬರುವ ಪ್ರತಿಯೊಬ್ಬರಿಗೂ, ಇರುವಲ್ಲೇ ಉದ್ಯೋಗ ನೀಡುವಂತೆ ಸಿಇಓಗಳಿಗೆ ಮತ್ತು ಗ್ರಾಮ ಮಟ್ಟದ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ