Breaking News

ವಿಬಿ-ಜಿ ರಾಮ್ ಜಿ ಯೋಜನೆಯಡಿ ಕೂಲಿಕಾರರಿಗೆ ನಿರಂತರವಾಗಿ ಕೆಲಸ ಒದಗಿಸಿ: ಜಿಪಂ ಸಿಇಒ

Spread the love

ಬೆಳಗಾವಿ: ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಆಜೀವಿಕಾ ಮಿಷನ್ (ಗ್ರಾಮೀಣ) ಯೋಜನೆಯಡಿ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕೂಲಿಕಾರರಿಗೆ ನಿರಂತರವಾಗಿ ಕೂಲಿ ಕೆಲಸ ಒದಗಿಸಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತ ಕಾರ್ಯಾಲಯದ ಸಭಾಂಗಣದಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯ ಪ್ರಗತಿ ಕುರಿತು ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳಿಗೆ ಜುಲೈ 27 (ಸೋಮವಾರ) ಹಮ್ಮಿಕೊಂಡಿದ್ದ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸ್ತುತ ಮಳೆ ಸಮರ್ಪಕವಾಗಿ ಆಗದೇ ಇರುವುದರಿಂದ ಗ್ರಾಮೀಣ ಭಾಗದ ಕೂಲಿಕಾರರಿಗೆ ಕೂಲಿ ಕೆಲಸದ ಅಗತ್ಯತೆ ಇದೆ. ಗ್ರಾಪಂ ವ್ಯಾಪ್ತಿಯಲ್ಲಿ ಕೈಗೊಳ್ಳಲು ಅನುಮೋದಿತ ಕಾಮಗಾರಿಗಳು ಇಲ್ಲದಿದ್ದ ಪಕ್ಷದಲ್ಲಿ ಸದ್ಯ 5 ಕಾಮಗಾರಿಗಳ ಕ್ರಿಯಾಯೋಜನೆ ಸಿದ್ಧಪಡಿಸಿ ಜಿಲ್ಲಾ ಪಂಚಾಯತಿಗೆ ಸಲ್ಲಿಸಿದರೆ ತುರ್ತಾಗಿ ಅನುಮೋದನೆ ನೀಡಲಾಗುವುದು. bernan, de ಬಗ್ಗೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಬರ ನಿರ್ವಹಣೆ ಕಾಮಗಾರಿಗಳಿಗೆ ಆದ್ಯತೆ ನೀಡಿ: ಗ್ರಾಪಂ ವ್ಯಾಪ್ತಿಯಲ್ಲಿ ಬರಗಾಲ ನಿರ್ವಹಣೆ ಕಾಮಗಾರಿಗಳಿಗೆ ಮೊದಲ ಆದ್ಯತೆ ನೀಡಬೇಕು. ಕೂಲಿಕಾರರು ಕೆಲಸಕ್ಕಾಗಿ ಗುಳೆ ಹೋಗದಂತೆ ಕ್ರಮವಹಿಸುವ ನಿಟ್ಟಿನಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಕೂಲಿಕಾರರಿಗೆ ನಿರಂತರವಾಗಿ ಕೆಲಸ ಒದಗಿಸಬೇಕು. ಶಾಶ್ವತ ಜೀವನೋಪಾಯಕ್ಕೆ ಅನುಕೂಲವಾಗುವಂತಹ ಕಾಮಗಾರಿಗಳನ್ನು ಕೂಡ ಕೈಗೊಳ್ಳಲು ಕ್ರಮವಹಿಸಬೇಕು. ಯೋಜನೆಯ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಗ್ರಾಮಗಳ ಸವಾರ್ಂಗೀಣ ಅಭಿವೃದ್ಧಿಗೆ ಕ್ರಮವಹಿಸಿ

 ವಿಚಿ-ಜಿ ರಾಮ್ ಜಿ ಯೋಜನೆಯಡಿ ಒಟ್ಟು 318 ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದ್ದು, ನೀರಿನ ಸಂರಕ್ಷಣೆ, ಗ್ರಾಮೀಣ ಮೂಲಸೌಕರ್ಯಗಳು, ಜೀವನೋಪಾಯ ಅಭಿವೃದ್ಧಿ, ನೈಸರ್ಗಿಕ ವಿಕೋಪ ನಿರ್ವಹಣೆಗೆ ಸಂಬಂಧಿಸಿದ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ. ಹೀಗಾಗಿ, ಗ್ರಾಮೀಣ ಭಾಗದ ಸವಾರ್ಂಗೀಣ ಅಭಿವೃದ್ಧಿಗೆ ಅಧಿಕಾರಿಗಳು ಯೋಜನೆ ರೂಪಿಸಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಗೋಮಾಳ ಗುರುತಿಸಿ

ಗ್ರಾಮೀಣ ಭಾಗದಲ್ಲಿ ಗೋಮಾಳಗಳನ್ನು ಗುರುತಿಸಿ ದನಕರುಗಳಿಗೆ ಮೇವು ಪೂರೈಸುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಬೇಕು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಅರಣ್ಯ ಇಲಾಖೆ ಹಾಗೂ ಕೃಷಿ ಇಲಾಖೆಯಿಂದ ಅನುಮೋದಿಸಲ್ಪಟ್ಟ ಕಾಮಗಾರಿಗಳನ್ನು ಕೈಗೊಂಡು ಕೂಲಿಕಾರರಿಗೆ ಕೆಲಸ ಒದಗಿಸುವಂತೆ ಸೂಚನೆ ನೀಡಿದರು.

ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪಶುಪಾಲನೆ, ಆರೋಗ್ಯ, ಅರಣ್ಯ, ಕೃಷಿ, ತೋಟಗಾರಿಕೆ ಸೇರಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕಾಮಗಾರಿಗಳನ್ನು ಕೂಡ ವಿಬಿ-ಜಿ ರಾಮ್ ಜಿ ಯೋಜನೆಯಡಿ ಕೈಗೊಳ್ಳಬಹುದಾಗಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸಮನ್ವಯ ಸಾಧಿಸಿ ಯೋಜನೆ ರೂಪಿಸಬೇಕು ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಎಚ್.ಡಿ. ಕೋಳಿಕರ್, ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಮಹಾಂತೇಶ ಮುರಗೋಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚೇತನಕುಮಾರ, ಡಿಡಿಪಿಐ ಲೀಲಾವತಿ ಹಿರೇಮಠ, ಡಿಎಚ್ ಒ ಡಾ. ಈಶ್ವರ ಗಡಾದ, ಡಿಎಫ್‌ಒ ರಾಜೇಶ್ವರಿ ಈರನಟ್ಟಿ ಸೇರಿ ವಿವಿಧ ಇಲಾಖೆಯ ಜಿಲ್ಲಾ ಹಾಗೂ ವಿವಿಧ ಇಲಾಖೆಯ ತಾಲೂಕಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.


Spread the love

About Laxminews 24x7

Check Also

ಕೆಪಿಎಸ್‍ಸಿ ಹಗರಣದ ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ

Spread the loveಬೆಂಗಳೂರು: ಕೆಪಿಎಸ್‍ಸಿಯ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ 80 ಲಕ್ಷ ರೂ.ವರೆಗೆ ಲಂಚ ಪಡೆದಿರುವ ಗಂಭೀರ ಆರೋಪಗಳಿದ್ದು, ಸಿಬಿಐ (CBI) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ