Breaking News

ತಮ್ಮ ಬರ ನೀಗಿಸಿಕೊಳ್ಳಲು ದೆಹಲಿಗೆ ಹೋಗಿದ್ದಾರೆ, ಸರ್ಕಾರಕ್ಕೆ ರೈತರ ಬರ ಆದ್ಯತೆಯಲ್ಲ: ಸಿ.ಟಿ ರವಿ

Spread the love

ರಾಯಚೂರು: ಸರ್ಕಾರದ ಸಚಿವರು, ಶಾಸಕರು ತಮ್ಮ ಬರ ನೀಗಿಸಿಕೊಳ್ಳಲು ದೆಹಲಿಗೆ ಹೋಗಿದ್ದಾರೆ. ಜನರ ಬರದ ವಿಷಯ ಅವರಿಗೆ ಆದ್ಯತೆಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಕಿಡಿಕಾರಿದ್ದಾರೆ.

ರಾಯಚೂರಿನ  ಲಿಂಗಸುಗೂರಿನ ಛತ್ತರ ಗ್ರಾಮದಲ್ಲಿ ಬರಪೀಡಿತ ಹೊಲಗಳಿಗೆ ಭೇಟಿ ನೀಡಿ, ವೀಕ್ಷಣೆ ಬಳಿಕ ಮಾತನಾಡಿದ ಅವರು ಬರ ಘೋಷಣೆಗೆ ಒತ್ತಾಯಿಸಿದರು. ಆಡಳಿತ ಪಕ್ಷದ ಶಾಸಕರು ತಮ್ಮ ಅಧಿಕಾರದ ದಾಹ ತೀರಿಸಿಕೊಳ್ಳಲು ದೆಹಲಿಗೆ ಹೋಗಿದ್ದಾರೆ. ರಾಜ್ಯದಲ್ಲಿ ಮಳೆಯಿಲ್ಲದೇ ಬರ ಆವರಿಸಿದೆ. ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು. ಸರ್ಕಾರದ ಮಂತ್ರಿಗಳು ಬರದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ಪರಿಹಾರಕ್ಕೆ ಕ್ರಮ ಕೈಗೊಳ್ಳುತ್ತಿಲ್ಲ ಆಕ್ರೋಶ ಹೊರಹಾಕಿದ್ದಾರೆ.

ಬಿಜೆಪಿಯ 6 ತಂಡಗಳ ಮೂಲಕ ಬರ ಪರಿಶೀಲನೆ ಮಾಡುತ್ತಿದ್ದೇವೆ. ರಾಜ್ಯದ ಬೇರೆ ಬೇರೆ ವರದಿಗಳ ಪ್ರಕಾರ 180ಕ್ಕೂ ಹೆಚ್ಚು ತಾಲ್ಲೂಕಿನಲ್ಲಿ ಮಳೆ ಕಡಿಮೆಯಾಗಿದೆ. ನೀರಾವರಿ ಪ್ರದೇಶದಲ್ಲಿ ಡ್ಯಾಂ ಭರ್ತಿಯಾಗದ ಹಿನ್ನೆಲೆ ಒಂದು ಬೆಳೆ ಬೆಳೆಯುವುದು ಕಷ್ಟವಾಗಿದೆ. ವಿಬಿ ಜಿರಾಮಜಿ ಅಡಿ ಕೃಷಿಕರಿಗೆ ಕೆಲಸಗಳನ್ನ ಕೊಡುವಂತ ಕೆಲಸ ಮಾಡಬೇಕು. ಬರ ಪೀಡಿತ ತಾಲೂಕುಗಳ ಘೋಷಣೆ ಮಾಡಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಹೇಳಿದ್ದಾರೆ.

ಜಾನುವಾರುಗಳಿಗೆ ನೀರಿಲ್ಲದ ಪರಿಸ್ಥಿತಿ ಮುಂದುವರೆಯುತ್ತಿದೆ. ಹೀಗಾಗಿ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಮೇವು ಬ್ಯಾಂಕ್ ತೆರೆಯಬೇಕು, ಜನ ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಇದೇ ವೇಳೆ ರೈತರೊಂದಿಗೆ ಸಂವಾದ ನಡೆಸಿ, ಸಮಸ್ಯೆಗಳನ್ನ ಆಲಿಸಿದ್ದಾರೆ.


Spread the love

About Laxminews 24x7

Check Also

ಕೆಪಿಎಸ್‍ಸಿ ಹಗರಣದ ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ

Spread the loveಬೆಂಗಳೂರು: ಕೆಪಿಎಸ್‍ಸಿಯ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ 80 ಲಕ್ಷ ರೂ.ವರೆಗೆ ಲಂಚ ಪಡೆದಿರುವ ಗಂಭೀರ ಆರೋಪಗಳಿದ್ದು, ಸಿಬಿಐ (CBI) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ