Breaking News

ಕಾಲುವೆ ನೀರು ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಬೆಳೆ ಹಾನಿ – ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

Spread the love

ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಇಂಗಳದಾಳದಲ್ಲಿ ನಾರಾಯಣಪುರ ಬಲದಂಡೆ ಕಾಲುವೆ ನೀರು ಜಮೀನಿಗೆ ನುಗ್ಗಿ ಲಕ್ಷಾಂತರ ರೂಪಾಯಿ ಬೆಳೆಹಾನಿಯಾಗಿದೆ.

ಕಾಲುವೆಯಲ್ಲಿ ಹೂಳು ತುಂಬಿ, ಗಿಡಗಂಟೆ ಬೆಳೆದ ಹಿನ್ನೆಲೆ ಜಮೀನುಗಳಿಗೆ ನೀರು ನುಗ್ಗಿದೆ. ಅಲ್ಲದೇ ಕಾಲುವೆಗೆ ನೀರು ಹರಿಸುವ ಮುನ್ನ ಜಂಗಲ್ ಕಟ್ ಮಾಡದ ಹಿನ್ನೆಲೆ ಅನಾಹುತ ನಡೆದಿದೆ.

ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದ ಹತ್ತಿ ಬೆಳೆ ಹಾನಿಯಾಗಿದ್ದು, ರೈತರು ಕಂಗಾಲಾಗಿದ್ದಾರೆ. ನಾರಾಯಣಪುರ ಬಲದಂಡೆ ಕಾಲುವೆಯ 17ನೇ ಉಪಕಾಲುವೆಯಲ್ಲಿ ಗಿಡ ಗಂಟೆಗಳು ಬೆಳೆದಿದ್ದು, ಇಂಗಳದಾಳ, ಬೂದಿನಾಳ ಜಮೀನುಗಳಿಗೆ ನೀರು ನುಗ್ಗಿದೆ. ಬೇರೆ ದಾರಿಯಿಲ್ಲದೇ ಜೆಸಿಬಿಯಿಂದ ಸ್ವತಃ ರೈತರೇ ಕಾಲುವೆ ಸ್ವಚ್ಛ ಮಾಡಿಕೊಂಡಿದ್ದಾರೆ.

ಕೆಬಿಜೆಎನ್‌ಎಲ್ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ರೈತರು ಆಕ್ರೋಶ ಹೊರಹಾಕಿದ್ದಾರೆ


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ