Breaking News

ಕೆಪಿಎಸ್‌ಸಿ ನಲ್ಲಿ ಹುದ್ದೆಗಾಗಿ ಡೀಲಿಂಗ್‌ ಪ್ರಕರಣ – 3 FIR ದಾಖಲು, 2 ಕೇಸ್‌ ಸಿಐಡಿಗೆ ವರ್ಗ

Spread the love

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗ ದಲ್ಲಿ ಹುದ್ದೆಗಾಗಿ ನಡೆದಿದೆ ಎನ್ನಲಾದ ಡೀಲಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಎಫ್‌ಐಆರ್‌ಗಳು ದಾಖಲಾಗಿವೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್  ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಈ ಕುರಿತು ಮಾತನಾಡಿದ ಅವರು, ಕೆಪಿಎಸ್‌ಸಿ ಯಲ್ಲಿ ಹುದ್ದೆಗಾಗಿ ನಡೆದಿದೆ ಎನ್ನಲಾದ ಡೀಲಿಂಗ್ ಪ್ರಕರಣ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ 3 ಎಫ್‌ಐಆರ್‌ ದಾಖಲಾಗಿದೆ. ಈ ಪೈಕಿ 2 ಎಫ್‌ಐಆರ್‌ಗಳನ್ನ ಸಿಐಡಿಗೆ ವರ್ಗಾವಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಉಳಿಕೆ ಒಂದು ಕೇಸ್‌ಗೆ ಕೋರ್ಟ್‌ನಲ್ಲಿ  ಅನುಮತಿ ಕೇಳಲಾಗಿದೆ. ಸದ್ಯ 2 ಕೇಸ್‌ಗಳನ್ನ ಸಿಐಡಿಗೆ ವರ್ಗಾವಣೆ ಮಾಡಿ ಡಿಜಿ ಅಂಡ್ ಐಜಿಪಿ ಆದೇಶ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಕೆಪಿಎಸ್‍ಸಿಯಲ್ಲಿ 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ 80 ಲಕ್ಷ ರೂ. ವೆರಗೆ ಲಂಚ ಪಡೆದಿರುವ ಗಂಭೀರ ಆರೋಪ ಕೇಳಿಬಂದಿದೆ. ಈ ಪ್ರಕರಣವನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಹಾಗೂ ಕೆಪಿಎಸ್‌ಸಿ ವಿರುದ್ಧ ವಿದ್ಯಾರ್ಥಿಗಳು ಹಾಗೂ ಪಶುವೈದ್ಯಾಧಿಕಾರಿಗಳು ಹೋರಾಟ ನಡೆಸುತ್ತಿದ್ದಾರೆ. ಇದಕ್ಕೆ ರಾಜ್ಯ ಬಿಜೆಪಿ ಘಟಕ ಕೂಡ ಬೆಂಬಲ ನೀಡಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ