Breaking News

ವೈದ್ಯನೊಬ್ಬ ಕೊರೊನಾ ಸೋಂಕಿತೆ ಮೇಲೆಯೇ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

Spread the love

ಲಕ್ನೋ: ಕೊರೊನಾ ಸೋಂಕಿತ ರೋಗಿಗಳನ್ನು ಮಹಾಮಾರಿಯಿಂದ ರಕ್ಷಿಸಲು ವೈದ್ಯಕೀಯ ಸಿಬ್ಬಂದಿ ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ. ಆದರೆ ಉತ್ತರ ಪ್ರದೇಶದಲ್ಲಿ ವೈದ್ಯನೊಬ್ಬ ಕೊರೊನಾ ಸೋಂಕಿತೆ ಮೇಲೆಯೇ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಉತ್ತರ ಪ್ರದೇಶದ ಅಲಿಘಡದಲ್ಲಿ ಈ ನೀಚ ಕೃತ್ಯ ಜರುಗಿದೆ. 28 ವರ್ಷದ ಕೊರೊನಾ ಸೋಂಕಿತೆ ಮೇಲೆ ಆಫ್ ಡ್ಯೂಟಿ ವೈದ್ಯನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಸೋಂಕಿತೆ ಮೇಲೆ ಆಸ್ಪತ್ರೆಯಲ್ಲಿಯೇ ಎರಡು ಬಾರಿ ವೈದ್ಯ ಈ ಹೀನಾಯ ಕೃತ್ಯವೆಸೆಗಿದ್ದಾನೆ

ಕೊರೊನಾ ಸೋಂಕು ತಗುಲಿ ಮಹಿಳೆ ಅಲಿಘಡದ ಡಿಡಿಯು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ರಾತ್ರಿ ವೇಳೆ ಆಫ್ ಡ್ಯೂಟಿಯಲ್ಲಿದ್ದ ವೈದ್ಯನೊಬ್ಬ ಸೋಂಕಿತೆ ವಾರ್ಡ್‍ಗೆ ಬಂದು ಎರಡು ಬಾರಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

ಈ ಬಗ್ಗೆ ಸೋಂಕಿತೆ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದು, ವಿಚಾರಣೆ ಮುಂದುವರಿಸಿದ್ದಾರೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ