ನವದೆಹಲಿ: ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ಮಸೂದೆ ಅಂಗೀಕಾರವಾಗಿದೆ. ಧ್ವನಿ ಮತದ ಮೂಲಕ ಮಸೂದೆಯನ್ನು ಅಂಗೀಕಾರ ಮಾಡಲಾಗಿದೆ.
ವಿಪಕ್ಷಗಳ ಗದ್ದಲ ಕೋಲಾಹಲದ ನಡುವೆಯೇ ಮಸೂದೆ ಅಂಗೀಕರಿಸಲಾಯಿತು. ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಮಸೂದೆಯ ಅಂಗೀಕಾರದ ಬಗ್ಗೆ ಅಧಿಕೃತವಾಗಿ ಘೋಷಿಸಿದ್ದಾರೆ. ಈ ಮಸೂದೆಯು ರಾಜ್ಯಸಭೆಯಲ್ಲಿ ಚರ್ಚೆಗೆ ಬಂದು ಅಲ್ಲಿ ಅಂಗೀಕೃತವಾದ ನಂತರ ರಾಷ್ಟ್ರಪತಿಗಳ ಅಂಕಿತ ಪಡೆದು ಕಾನೂನಿನ ರೂಪ ಪಡೆಯಲಿದೆ.
ಲೋಕಸಭೆ ಜು.30, ಬೆಳಗ್ಗೆ 11 ಗಂಟೆಗೆ ಮುಂದೂಡಿಕೆಯಾಗಿದೆ.
Laxmi News 24×7