Breaking News

ಸಿಎಂ ಸ್ವಕ್ಷೇತ್ರದಲ್ಲಿ ಬರ ಪರಿಶೀಲನೆ ನಡೆಸಿದ ಬಿಜೆಪಿ ನಿಯೋಗ – ಶೀಘ್ರ ಬರ ಪರಿಹಾರ ಘೋಷಣೆಗೆ ಒತ್ತಾಯ

Spread the love

ರಾಮನಗರ: ರಾಜ್ಯದಲ್ಲಿ ಮಳೆ ಕೊರತೆಯಿಂದ ಬರ  ಪರಿಸ್ಥಿತಿ ಹಿನ್ನೆಲೆ ಬಿಜೆಪಿ  ರಾಜ್ಯಾದ್ಯಂತ ಬರ ಪರಿಸ್ಥಿತಿಯ ಅಧ್ಯಯನಕ್ಕೆ ಮುಂದಾಗಿದ್ದು, ಇಂದು ಸಿಎಂ ಸ್ವಕ್ಷೇತ್ರ ಕನಕಪುರದಲ್ಲಿ  ಬಿಜೆಪಿ ನಿಯೋಗ ಬರ ಅಧ್ಯಯನ ಪರಿಶೀಲನೆ ಮಾಡಿದೆ.

ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಕನಕಪುರ ತಾಲೂಕಿಗೆ ಭೇಟಿ ನೀಡಿದ ಬಿಜೆಪಿ ನಿಯೋಗ ಸ್ಥಳೀಯ ರೈತರ ಸಂಕಷ್ಟ ಆಲಿಸಿತು. ತಾಲೂಕಿನ ಮಲ್ಲೇಗೌಡನದೊಡ್ಡಿ ಹಾಗೂ ಸಾಸಲಾಪುರ ಗ್ರಾಮಗಳಿಗೆ ಭೇಟಿ ನೀಡಿ, ನೀರಿಲ್ಲದೆ ಒಣಗುತ್ತಿರುವ ಬಾಳೆ ಮತ್ತು ಅಡಿಕೆ ತೋಟಗಳನ್ನು ಪರಿಶೀಲಿಸಿ, ಒಣಗಿರುವ ಕೆರೆ-ಕಟ್ಟೆಗಳಿಗೂ ಭೇಟಿ ನೀಡಿ ಸ್ಥಿತಿಗತಿಯನ್ನು ಅವಲೋಕಿಸಿತು.

ಮಾಜಿ ಶಾಸಕ ಎನ್. ಮಹೇಶ್, ಶಾಸಕ ಶ್ರೀವತ್ಸ, ಎಂಎಲ್ಸಿಗಳಾದ ಗೋಪಿನಾಥ್ ರೆಡ್ಡಿ, ರಘುಕೌಟಿಲ್ಯ ಹಾಗೂ ಸ್ಥಳೀಯ ಬಿಜೆಪಿ ನಾಯಕರನ್ನೊಳಗೊಂಡ ನಿಯೋಗ, ರಾಜ್ಯ ಸರ್ಕಾರವು ಬರ ಪರಿಹಾರ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳಬೇಕು ಮತ್ತು ಸಂಕಷ್ಟದಲ್ಲಿರುವ ಬೆಳೆಗಾರರಿಗೆ ತಕ್ಷಣವೇ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿತು.


Spread the love

About Laxminews 24x7

Check Also

ನಮಗೇ ಕುಡಿಯೋಕೆ ನೀರಿಲ್ಲ, ತಮಿಳುನಾಡಿಗೆ ಬಿಟ್ರೆ ಬೀದಿಗಿಳಿದು ಉಗ್ರ ಹೋರಾಟ – ದರ್ಶನ್ ಪುಟ್ಟಣ್ಣಯ್ಯ ಎಚ್ಚರಿಕೆ

Spread the loveಮಂಡ್ಯ: ರಾಜ್ಯದಲ್ಲಿ ಮಳೆಯ ಅಭಾವದಿಂದ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿರುವಾಗ, ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ