Breaking News

ಕಾವೇರಿ ಜಲ ವಿವಾದ ಚರ್ಚೆಗೆ ತಮಿಳುನಾಡು ಪಟ್ಟು – ರಾಜ್ಯಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿದ ಕಾಂಗ್ರೆಸ್ ಸಂಸದ

Spread the love

ನವದೆಹಲಿ: ಕಾವೇರಿ ಜಲ ವಿವಾದವನ್ನು ರಾಜ್ಯಸಭೆಯಲ್ಲಿ ಚರ್ಚೆಗೆ ತೆಗೆದುಕೊಳ್ಳುವಂತೆ ತಮಿಳುನಾಡು ಮತ್ತೊಮ್ಮೆ ಒತ್ತಾಯಿಸಿದೆ.

ಈ ಸಂಬಂಧ ತಮಿಳುನಾಡಿನ ಕಾಂಗ್ರೆಸ್ ರಾಜ್ಯಸಭಾ ಸಂಸದ ಪ್ರವೀಣ್ ಚಕ್ರವರ್ತಿ ಅವರು ರಾಜ್ಯಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿದ್ದಾರೆ. ರೈತರ ಹಿತಾಸಕ್ತಿ ಹಾಗೂ ರಾಜ್ಯಗಳ ನಡುವಿನ ಸೂಕ್ಷ್ಮ ಸಂಬಂಧಕ್ಕೆ ಸಂಬಂಧಿಸಿದ ಈ ವಿಚಾರವನ್ನ ರಾಜ್ಯಸಭೆಯಲ್ಲಿ ಸಮಗ್ರವಾಗಿ ಚರ್ಚಿಸಬೇಕೆಂದು ಆಗ್ರಹಿಸಿದ್ದಾರೆ.

ಸಂಸದರು, ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಜಲಶಕ್ತಿ ಸಚಿವಾಲಯವು ದಾರಿ ತಪ್ಪಿಸುವ ಉತ್ತರ ನೀಡಿದೆ ಎಂದೂ ಕೂಡ ಅವರು ಆರೋಪಿಸಿದ್ದಾರೆ.

ಅದೇ ವೇಳೆ, ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕವು ತಮಿಳುನಾಡಿಗೆ 4 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಶಿಫಾರಸು ಮಾಡಿದೆ. ಸಮಿತಿಯ ಶಿಫಾರಸಿನಂತೆ ಕರ್ನಾಟಕ ಸರ್ಕಾರ ನೀರು ಹಂಚಿಕೆ ಆದೇಶ ಪಾಲಿಸಬೇಕು ಎಂದು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ನಮಗೇ ಕುಡಿಯೋಕೆ ನೀರಿಲ್ಲ, ತಮಿಳುನಾಡಿಗೆ ಬಿಟ್ರೆ ಬೀದಿಗಿಳಿದು ಉಗ್ರ ಹೋರಾಟ – ದರ್ಶನ್ ಪುಟ್ಟಣ್ಣಯ್ಯ ಎಚ್ಚರಿಕೆ

Spread the loveಮಂಡ್ಯ: ರಾಜ್ಯದಲ್ಲಿ ಮಳೆಯ ಅಭಾವದಿಂದ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿರುವಾಗ, ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ