Breaking News

ತಮಿಳುನಾಡಿಗೆ ಕಾವೇರಿ ನೀರು – ಜು.31ಕ್ಕೆ ಮಂಡ್ಯದಲ್ಲಿ ಬೃಹತ್‌ ಹೋರಾಟಕ್ಕೆ ಕರೆಕೊಟ್ಟ ವಿಜಯೇಂದ್ರ

Spread the love

ಶಿವಮೊಗ್ಗ: ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ) ಜು.31ಕ್ಕೆ ಮಂಡ್ಯದಲ್ಲಿ ಬೃಹತ್‌ ಹೋರಾಟ ನಡೆಸುತ್ತೇವೆ. ಆ ಭಾಗದ ರೈತರು, ರೈತ ಸಂಘಟನೆಗಳು ಹೋರಾಟಕ್ಕೆ ಬೆಂಬಲ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ  ಮನವಿ ಮಾಡಿದರು.

ನಗರದ  ಬೆಕ್ಕಿನಕಲ್ಮಠದಲ್ಲಿ ಗುರುಪೂರ್ಣಿಮೆಯ ಸಲುವಾಗಿ ಭೇಟಿ ನೀಡಿದ್ದರು. ಈ ವೇಳೆ ಕಾವೇರಿ ನೀರು ನಿರ್ವಾಹಣಾ ಸಮಿತಿ ತೀರ್ಪು ನೀಡಿದ ವಿಚಾರಕ್ಕೆ ಅವರು ಪ್ರತಿಕ್ರಿಯಿಸಿದರು. ಆ ತೀರ್ಪು ಕಾವೇರಿ ಕೊಳ್ಳದ ರೈತರಿಗೆ ಬರೆ ಎಳೆದಂತೆ ಆಗಿದೆ. ಬರ ಪರಿಸ್ಥಿತಿ ಇದೆ, ಯಾರು ಕೂಡ ಬೆಳೆ ಬೆಳೆಯಬೇಡಿ ಎಂದು ಸಿಎಂ ಕೆಲವು ದಿನದ ಹಿಂದೆ ಕರೆ ಕೊಟ್ಟಿದ್ದರು. ರಾಜ್ಯದ ರೈತರಿಗೆ ಸಿಎಂ ಧೈರ್ಯ ತುಂಬಬೇಕಿತ್ತು. ಅವರು ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಕದ್ದುಮುಚ್ಚಿ ರಾತ್ರೋರಾತ್ರಿ ನೀರು ಬಿಡುವ ಕೆಲಸ ಆಗಿತ್ತು. ತಮಿಳುನಾಡಿನ ಮುಖ್ಯಮಂತ್ರಿಗಳನ್ನು ಖುಷಿ ಪಡಿಸಲು ರಾಜ್ಯದ ರೈತರಿಗೆ ಸಿಎಂ ಅನ್ಯಾಯ ಮಾಡಿದ್ದರು. ಯಾಕೇ ಇಂತಹ ಕಪಟ ನಾಟಕ ಮಾಡುತ್ತಿದ್ದೀರಿ? ಸಿಎಂ ಯಾಕೆ ರೈತರ ಜೊತೆ ಚೆಲ್ಲಾಟ ಆಡುತ್ತಿದ್ದಾರೆ? ಈ ಚೆಲ್ಲಾಟ ಆಡೋದು ಬಿಟ್ಟು, ಸಮಿತಿಗೆ ಮರು ಪರಶೀಲನಾ ಅರ್ಜಿ ದಾಖಲಿಸಬೇಕು ಎಂದು ಡಿ.ಕೆ ಶಿವಕುಮಾರ್‌ ಅವರ ವಿರುದ್ಧ ಅಸಮಾಧಾನ ಹೊರಹಾಕಿದರು.

ಡ್ಯಾಂನಲ್ಲಿ 17.39 ಟಿಎಂಸಿ ನೀರು ಸಂಗ್ರಹವಿದೆ. ಅದರಲ್ಲಿ 5 ಟಿಎಂಸಿ ಡೆಡ್ ಸ್ಟೋರೇಜ್. ಉಳಿದ 12-13 ಟಿಎಂಸಿ ನೀರಲ್ಲಿ ತಮಿಳುನಾಡಿಗೆ ಬಿಟ್ಟರೇ ರಾಜ್ಯದ ರೈತರ ಗತಿಯೇನು? ಸಿಎಂ ಯಾಕೇ ಆ ಭಾಗದ ರೈತರ ಜೊತೆ ಚೆಲ್ಲಾಟ ಆಡ್ತಿದ್ದಾರೆ. ಸಮಿತಿ ಮುಂದೆ ಸರಿಯಾದ ರೀತಿ ವಾದ ಮಾಡಬೇಕು ಎಂದು ಆಗ್ರಹಿಸಿದರು.

ತೀವ್ರ ಬರಗಾಲದ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು. ಎಷ್ಟು ಬಾರಿ ದೆಹಲಿಗೆ ಹೋಗ್ತಾರೆ? ವಕೀಲರ ಜೊತೆ ಕೂತು ಮಾತಾಡೋಕೆ ಅಗಲ್ವಾ? ಎಂದು ಹರಿಹಾಯ್ದಿದ್ದಾರೆ.


Spread the love

About Laxminews 24x7

Check Also

ನಮಗೇ ಕುಡಿಯೋಕೆ ನೀರಿಲ್ಲ, ತಮಿಳುನಾಡಿಗೆ ಬಿಟ್ರೆ ಬೀದಿಗಿಳಿದು ಉಗ್ರ ಹೋರಾಟ – ದರ್ಶನ್ ಪುಟ್ಟಣ್ಣಯ್ಯ ಎಚ್ಚರಿಕೆ

Spread the loveಮಂಡ್ಯ: ರಾಜ್ಯದಲ್ಲಿ ಮಳೆಯ ಅಭಾವದಿಂದ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿರುವಾಗ, ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ