Breaking News

ರಕ್ಕಸಕೊಪ್ಪ ಜಲಾಶಯ ಭರ್ತಿ

Spread the love

ಬೆಳಗಾವಿ : ಜಿಲ್ಲೆಯಲ್ಲಿ ಹಾಗೂ ಮಹಾರಾಷ್ಟ್ರ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಕೆಲ ದಿನದಿಂದ ಸುರಿದ ಮಳೆಯಿಂದಾಗಿ ಜಿಲ್ಲೆಯ ಸಂಗ್ರಹ ನದಿಗಳು ಮೈದುಂಬಿ ಹರಿಯುತ್ತಿವೆ,ಇದೀಗ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ.
ರಕ್ಕಸಕೊಪ್ಪ ಜಲಾಶಯ ಭರ್ತಿ: 
ಮಳೆಯಿಂದಾಗಿ ಕೃಷ್ಣಾ,ವೇದಗಂಗಾ,ದೂಧಗಂಗಾ ,ಹಿರಣ್ಯಕೇಶಿ,ಘಟಪ್ರಭಾ,ಮಲಪ್ರಭಾ ನದಿಗಳಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ.ಮಾರ್ಕೆಂಡಯ ನದಿ ನೀರಿನಿಂದ 2475 ಅಡಿ ಸಾಮರ್ಥ್ಯದ ರಕಸಕೊಪ್ಪ ಜಲಾಶಯ ಭರ್ತಿ ಹಂತ ತಲುಪಿದ್ದು,ಬುಧವಾರ 2473 ಅಡಿ ನೀರು ಸಂಗ್ರಹವಾಗಿದ್ದು,ಹೆಚ್ಚಿನ ನೀರು ಹೊರ ಬಿಡಲಾಗುತ್ತಿದೆ.
ಕೃಷ್ಣಾ ನದಿಗೂ ಅಪಾರ ನೀರು:
ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜ್ ಮೂಲಕ ಕೃಷ್ಣಾ ನದಿಗೆ ಕಳೆದೊಂದು ವಾರದಿಂದ ನಿತ್ಯ 50 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಜೊತೆಗೆ ನದಿಗಳು ತುಂಬಿ ಹರಿಯುತ್ತ ನದಿ ಅವಲಂಬಿತ ಕೃಷಿಕರಲ್ಲಿ ಸಂತಸ ಮೂಡಿದೆ.

Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ