Breaking News

ಮಲಪ್ರಭಾ ಬಲದಂಡೆ ಕಾಲುವೆಗೆ ನೀರು ಬಿಡಲು ಒತ್ತಾಯ

Spread the love

ಬೆಳಗಾವಿ:ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಲಪ್ರಭಾ ಬಲದಂಡೆ ಕಾಲುವೆಗೆ 2ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಆಗ್ರಹಿಸಿ ಸವದತ್ತಿ ತಾಲೂಕಿನ ವಿವಿಧ ಗ್ರಾಮಸ್ಥರು ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
 ಈ ಬಾರಿ ಮುಂಗಾರಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿರುವ ಹಿನ್ನೆಲೆ ಕೆರೆ ಕಟ್ಟೆಗಳು ನೀರಿಲ್ಲದೆ ಬತ್ತುತ್ತಿವೆ. ಅಂತರ್ಜಲ ಮಟ್ಟ ತೀವ್ರ ಕುಸಿತದಿಂದಾಗಿ ಕೊಳವೆ ಬಾವಿಗಳು ಬಂದ್ ಆಗುತ್ತಿವೆ. ಇದರಿಂದಾಗಿ ಗ್ರಾಮಗಳಲ್ಲಿ ಜನ ಜಾನುವಾರಗಳಿಗೆ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಿದೆ.ಈ ಸಮಸ್ಯೆ ಪರಿಹರಿಸಲು ಕೂಡಲೇ ಮಲಪ್ರಭಾ ಬಲದಂಡೆ ಕಾಲುವೆಗೆ ನೀಡುವ ಬಿಡುಗಡೆ ಮಾಡುವಂತೆ ರೈತರು ವಿನಂತಿಸಿದರು.
ಈಗಾಗಲೇ ಮಲಪ್ರಭಾ ಬಲದಂಡೆ ಕಾಲುವೆಗೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಕೂಡಲೇ ಕಾಲುವೆಗಳಿಗೆ ನೀರು ಹರಿಸಿದರ ಕೆರೆಕಟ್ಟೆಗಳು ತುಂಬಿ ಅನುಕೂಲವಾಗುತ್ತದೆ. ನೀರು ಬಿಡಲು ವಿಳಂಬ ಮಾಡಿದರೆ ಗ್ರಾಮೀಣ ಪರಿಸ್ಥಿತಿ ತೀವ್ರರೂಪ ಪಡೆದುಕೊಳ್ಳಲಿದೆ ಎಂದು ಮನವಿಮೂಲಕ ಎಚ್ಚರಿಸಿದರು.

Spread the love

About Laxminews 24x7

Check Also

ಪರಿಸರ ಸಂಬಂಧಿ ಅನುಮತಿ ಸಿಕ್ಕರೆ 3 ತಿಂಗಳಲ್ಲಿ ವಿಜಯಪುರ ಏರ್‌ಪೋರ್ಟ್ ಕಾರ್ಯಾರಂಭ: ಎಂ.ಬಿ.ಪಾಟೀಲ್‌

Spread the loveವಿಜಯಪುರ: ವಿಜಯಪುರ ವಿಮಾನ ನಿಲ್ದಾಣದ ಕಾರ್ಯಾರಂಭಕ್ಕೆ ಇದ್ದ ಪ್ರಮುಖ ಅಡೆತಡೆ ದೂರವಾಗಿದ್ದು, ಪರಿಸರ ಸಂಬಂಧಿತ ಅನುಮತಿ ಸಿಕ್ಕರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ