Breaking News

ಕಾಫಿ ತೋಟದಲ್ಲಿ ಕೆಲಸದ ವೇಳೆ ಮರ ಬಿದ್ದು ಇಬ್ಬರು ಮಹಿಳೆಯರ ದುರ್ಮರಣ

Spread the love

ಮಡಿಕೇರಿ: ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬೃಹತ್ ಮರ ಬಿದ್ದ ಪರಿಣಾಮ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಮಾದಾಪುರ ಸಮೀಪದ ಬಿಳಿಗೇರಿ ಗ್ರಾಮದಲ್ಲಿ ನಡೆದಿದೆ.

ಬಿಳಿಗೇರಿ ಗ್ರಾಮದ ಟಾಟಾ ಕಾಫಿ ತೋಟದಲ್ಲಿ ಈ ಘಟನೆ ನಡೆದಿದೆ. ದಿನನಿತ್ಯದ ಕೆಲಸದಲ್ಲಿ ನಿರತರಾಗಿದ್ದ ಕಾರ್ಮಿಕರ ಮೇಲೆ ಏಕಾಏಕಿ ಬೃಹತ್ ಮರ ಉರುಳಿ ಬಿದ್ದಿದೆ. ಪರಿಣಾಮ ಅಸ್ಸಾಂ ಮೂಲದ ಪರ್ಬಿನಾ ಖಾತುನ್ (29) ಹಾಗೂ ಅಲೆಮನ್ (48) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರೊಂದಿಗೆ ಕೆಲಸ ಮಾಡುತ್ತಿದ್ದ ಇನ್ನಿಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸೋಮವಾರಪೇಟೆ ಪೊಲೀಸರು ಹಾಗೂ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಈ ಕುರಿತು ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಳೆಗಾಲದ ಹಿನ್ನೆಲೆ ಮರಗಳು ದುರ್ಬಲಗೊಂಡಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕಾಫಿ ತೋಟಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಸುರಕ್ಷತೆಗೆ ಹೆಚ್ಚಿನ ಮುನ್ನೆಚ್ಚರಿಕೆ ಅಗತ್ಯ ಎಂಬ ಮಾತುಗಳು ಕೇಳಿಬರುತ್ತಿವೆ.


Spread the love

About Laxminews 24x7

Check Also

ಪರಿಸರ ಸಂಬಂಧಿ ಅನುಮತಿ ಸಿಕ್ಕರೆ 3 ತಿಂಗಳಲ್ಲಿ ವಿಜಯಪುರ ಏರ್‌ಪೋರ್ಟ್ ಕಾರ್ಯಾರಂಭ: ಎಂ.ಬಿ.ಪಾಟೀಲ್‌

Spread the loveವಿಜಯಪುರ: ವಿಜಯಪುರ ವಿಮಾನ ನಿಲ್ದಾಣದ ಕಾರ್ಯಾರಂಭಕ್ಕೆ ಇದ್ದ ಪ್ರಮುಖ ಅಡೆತಡೆ ದೂರವಾಗಿದ್ದು, ಪರಿಸರ ಸಂಬಂಧಿತ ಅನುಮತಿ ಸಿಕ್ಕರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ