Breaking News

ಚಿಲ್ಲರೆ ಇಲ್ಲವೆಂದು ಸಚಿವರನ್ನು ಬಸ್ಸಿನಿಂದ ಕೆಳಗಿಳಿಸಿದ್ದ ನಿರ್ವಾಹಕನ ಅಮಾನತು ವಾಪಸ್

Spread the love

ಬೆಂಗಳೂರು: ಚಿಲ್ಲರೆ ಇಲ್ಲದ ಕಾರಣಕ್ಕೆ ಕಂಡಕ್ಟರ್ ಸಚಿವರನ್ನೇ ಬಸ್‌ನಿಂದ ಕೆಳಗಿಳಿಸಿದ್ದ ನಿರ್ವಾಹಕನ ಅಮಾನತು ತೆರವಿಗೆ ಸಚಿವ ಬೈರತಿ ಸುರೇಶ್  ಆದೇಶ ಹೊರಡಿಸಿದ್ದಾರೆ.

ಜುಲೈ 11ರ ರಾತ್ರಿ ಸಾರಿಗೆ ಸಚಿವರು ದಿಢೀರನೆ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಸಿದ್ದರು. ಅಂದು ಕೆಂಪೇಗೌಡ ಬಸ್ ನಿಲ್ದಾಣದಿಂದ ನಾಗಶೆಟ್ಟಿಹಳ್ಳಿಗೆ ಸಂಚರಿಸುತ್ತಿದ್ದ ಬಸ್ನಲ್ಲಿ ಪ್ರಯಾಣಿಸುವಾಗ ನಿರ್ವಾಹಕ ಟಿ.ಜಿ. ರಾಮಕೃಷ್ಣ ಎಂಬುವರು ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ಸಚಿವರನ್ನು ಬಸ್ಸಿನಿಂದ ಕೆಳಗೆ ಇಳಿಸಿದ್ದರು. ಈ ಹಿನ್ನೆಲೆಯಲ್ಲಿ ಬಿಎಂಟಿಸಿ ಸಂಸ್ಥೆಯು ರಾಮಕೃಷ್ಣ ಅವರನ್ನು ಅಮಾನತುಗೊಳಿಸಿತ್ತು.

ಇಂದು ಸಚಿವರನ್ನು ಭೇಟಿಯಾದ ಕಂಡಕ್ಟರ್ ತಮ್ಮ ತಪ್ಪಿನ ಬಗ್ಗೆ ಸಚಿವರ ಬಳಿ ಕ್ಷಮೆಯಾಚಿಸಿದ್ದಾರೆ. ಈ ಹಿನ್ನೆಲೆ ಸಾರಿಗೆ ಸಚಿವರು ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕೆಂದು ಸೂಚಿಸಿ ರಾಮಕೃಷ್ಣ ಅಮಾನತನ್ನು ರದ್ದುಪಡಿಸಿ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವರ ಆದೇಶ ನೀಡಿದ್ದಾರೆ.

ಇನ್ನು ಚಿಲ್ಲರೆ ವಿಚಾರದಲ್ಲಿ ಪ್ರಯಾಣಿಕರನ್ನು ಶೋಷಣೆ ಮಾಡಬಾರದು ಎಂದು ಬೈರತಿ ಸುರೇಶ್ ಬಿಎಂಟಿಸಿ ಸೇರಿದಂತೆ ಎಲ್ಲಾ ಸಾರಿಗೆ ನಿಗಮಗಳ ನಿರ್ವಾಹಕರು ಮತ್ತು ಚಾಲಕರಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ಪ್ರಯಾಣಿಕರನ್ನು ಕೆಳಗಿಳಿಸುವ ನಿರ್ವಾಹಕರ ಧೋರಣೆ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಅಲ್ಲದೇ, ಬಿಎಂಟಿಸಿ ಬಸ್ಸಿನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ನನಗೂ ಇಂತಹ ಅನುಭವ ಆಗಿದೆ. ಚಿಲ್ಲರೆ ನೆಪವೊಡ್ಡಿ ಪ್ರಯಾಣಿಕರನ್ನು ಅರ್ಧ ದಾರಿಯಲ್ಲಿ ಇಳಿಸುವುದು ಅಮಾನವೀಯವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರನ್ನು ಶೋಷಣೆ ಮಾಡಬಾರದು ಎಂದು ಸೂಚಿಸಿದ್ದಾರೆ.

ಕರ್ತವ್ಯದಲ್ಲಿ ಸಹನೆ ಇರಲಿ: 
ಶಕ್ತಿ ಯೋಜನೆಯಡಿ ಪ್ರಯಾಣಿಸುವ ಮಹಿಳೆಯರು ಮತ್ತು ಇತರ ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಯಾರ ಮೇಲೆಯೂ ದುರ್ವರ್ತನೆ ತೋರಬಾರದು. ಹಾಗೊಂದು ವೇಳೆ ದೂರುಗಳ ಬಂದರೆ ತಪ್ಪಿತಸ್ಥ ನಿರ್ವಾಹಕರು ಮತ್ತು ಚಾಲಕರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ