Breaking News

ಶಾಲೆಗೆ ತೆರಳುವಾಗ ಥಾರ್‌ ಡಿಕ್ಕಿ – 10 ವರ್ಷದ ಬಾಲಕಿ ಸ್ಥಳದಲ್ಲೇ ಸಾವು

Spread the love

ನೆಲಮಂಗಲ: ತನ್ನ ದೊಡ್ಡಮ್ಮನ ಜೊತೆಗೆ ಶಾಲೆಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಬಾಲಕಿಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸ್ಥಳದಲ್ಲೇ ದಾರುಣ ಸಾವಿಗೀಡಾಗಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.

ಬೆಂಗಳೂರು  ಹೊರವಲಯದ ನೆಲಮಂಗಲ ತಾಲೂಕಿನ ಬೀರವಾರ ಗ್ರಾಮದ ಬಳಿ ನಡೆದಿದ್ದು 10 ವರ್ಷದ ಲಿಖಿತಾ ಮೃತ ಬಾಲಕಿ ಎಂದು ಗುರುತಿಸಲಾಗಿದೆ.

ಲಿಖಿತ ಸರ್ಕಾರಿ ಶಾಲೆಯಲ್ಲಿ 4ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಇಂದು ತಾಯಿ ತಿಂಡಿ ಮಾಡಿಸಿ ಕೆಲಸಕ್ಕೆ ತೆರಳಿದ್ದಾರೆ. ನಂತರ ಲಿಖಿತಾ ತನ್ನ ದೊಡ್ಡಮ್ಮನ ಜೊತೆಗೆ ಶಾಲೆಗೆ ತೆರಳುವಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಲಿಖಿತಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಇನ್ನೂ ನೆಲಮಂಗಲ ಮಾರ್ಗದಿಂದ ಕುಣಿಗಲ್ ಕಡೆ ಸಾಗುತ್ತಿದ್ದ ಕಾರು, ಚಾಲಕನ ನಿರ್ಲಕ್ಷ್ಯದಿಂದ ವೇಗವಾಗಿ ಬಂದು ಡಿಕ್ಕಿಯಾಗಿದೆ. ಘಟನೆಯಲ್ಲಿ ಲಿಖಿತಾಳ ದೊಡ್ಡಮ್ಮ ಪ್ರಾಣಪಾಯದಿಂದ ಪಾರಾಗಿದ್ದಾರೆ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನೂ ಈ ಬೀರವಾರ ಗ್ರಾಮದ ಬಳಿ ಪದೇ ಪದೇ ಅಪಘಾತ ಪ್ರಕರಣಗಳು ಸಂಭವಿಸಿತಿದ್ದು ಸ್ಕೈವಾಕ್ ನಿರ್ಮಾಣ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಬ್ಯಾಲೆಟ್ ಪೇಪರ್‌ನಲ್ಲೇ ಕಾಂಗ್ರೆಸ್ ಸೋತಿದೆ, ಪತನದ ದಿನಗಳು ಹತ್ತಿರ ಬರ್ತಿದೆ: ನಿಖಿಲ್ ಕುಮಾರಸ್ವಾಮಿ

Spread the loveರಾಮನಗರ: ಕಾಂಗ್ರೆಸ್  ಇವಿಎಂ ಮೇಲೆ ಅನುಮಾನ ಪಟ್ಟು, ಬ್ಯಾಲೆಟ್ ಪೇಪರ್  ಚುನಾವಣೆ ಬೇಕು ಅಂತಿದ್ದರು. ಈಗ ಬ್ಯಾಲೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ