Breaking News

ಪಾಲಿಕೆ ಸಿಬ್ಬಂದಿ ಕರ್ತವ್ಯನಿಷ್ಠೆ ಇತರರಿಗೆ ಮಾದರಿ

Spread the love

ಬೆಳಗಾವಿ:ಮಹಾನಗರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)ಯಲ್ಲಿ ತೊಡಗಿಸಿಕೊಂಡಿರುವ ಅಧಿಕಾರಿ, ಸಿಬ್ಬಂದಿ ಕರ್ತವ್ಯನಿಷ್ಠೆ ಇತರರಿಗೆ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಹೇಳಿದರು.
ಪಾಲಿಕೆಯ ಚುನಾವಣಾ ವಿಭಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿ, ಬೆಳಗಾವಿ ಉತ್ತರ ಮತ್ತು ದಕ್ಷಿಣ ವಿಧಾನಸಭಾ ಕ್ಷೇತ್ರಗಳಲ್ಲಿ ಎಸ್‌ಐಆರ ಕಾರ್ಯದ ಪ್ರಗತಿ, ದಾಖಲೆಗಳ ಪರಿಶೀಲನೆ ಹಾಗೂ ಗಣಕೀಕರಣ ಪ್ರಕ್ರಿಯೆ ನಿಗದಿತ ಸಮಯದಲ್ಲಿಯೇ ಪೂರ್ಣಗೊಳಿಸಬೇಕು. ಭಾಷಾ ಸಮಸ್ಯೆ ಸೇರಿ ಸಾಕಷ್ಟು ತೊಂದರೆ,ಕಚೇರಿಯ ದಿನನಿತ್ಯದ ಕೆಲಸದ ಜತೆಗೆ ಎಸ್‌ಐಆರ ಕಾರ್ಯವನ್ನು ಸಮಯೋಚಿತವಾಗಿ ಹಾಗೂ ನಿಖರವಾಗಿ ಪೂರ್ಣಗೊಳಿಸಲು ಸಿಬ್ಬಂದಿ ನಿರಂತರವಾಗಿ ಶ್ರಮಿಸುತ್ತಿರುವುದು ಶ್ಲಾಘನೀಯ.
ಪಾಲಿಕೆ  ಉಪ ಆಯುಕ್ತ ಡಾ.ಸಿದ್ದು ಹುಲ್ಲೋಳಿ ಮಾತನಾಡಿ, ಕಳೆದ ಒಂದು ತಿಂಗಳಿನಿಂದ ದಕ್ಷಿಣ ಮತ್ತು ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅಧಿಕಾರಿ, ಸಿಬ್ಬಂದಿ ನಿರಂತರ ಶ್ರಮಿಸುತ್ತಿದ್ದಾರೆ. ನಿಗದಿತ ಸಮಯದಲ್ಲಿಯೇ ಎಸ್ ಐಆರ್ ಪ್ರಕ್ರಿಯೇ ಪೂರ್ಣಗೊಳಿಸಲು ಸಂಕಲ್ಪ ಮಾಡಿದ್ದೇವೆ ಎಂದು ಹೇಳಿದರು.

Spread the love

About Laxminews 24x7

Check Also

ಅತ್ತೆ-ಮಾವನ ಮನಸ್ಥಿತಿ ಎಂದಿಗೂ ಬದಲಾಗಲ್ಲʼ; ವಿಡಿಯೋ ರೆಕಾರ್ಡ್‌ ಮಾಡಿ ನೇಣಿಗೆ ಶರಣಾದ ಶಿಕ್ಷಕಿ

Spread the loveನವದೆಹಲಿ: ಮದುವೆಯಾದ 8 ತಿಂಗಳ ಬಳಿಕ ಸರ್ಕಾರಿ ಶಿಕ್ಷಕಿಯೊಬ್ಬರು ವಿಡಿಯೋ ರೆಕಾರ್ಡ್‌ ಮಾಡಿ, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ